ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 
ರಾಜ್ಯ

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಹೆಚ್ ಎ ಎಲ್ ನಲ್ಲೇ ಹೆಲಿಕಾಪ್ಟರ್ ತಯಾರು ಮಾಡಲಾಗುತ್ತಿದೆ. ಏರ್ ಶೋ ವೇಳೆ ನಾನು, ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ನೋಡಿದ್ದೆವು. ಅಲ್ಲಿನ ಹೆಲಿಕಾಪ್ಟರ್ ಚೆನ್ನಾಗಿತ್ತು. ಅವರೇ ನಿರ್ವಹಣೆ ಮಾಡುತ್ತಾರೆ. ಹೀಗಾಗಿ ಅವರ ಸೇವೆಗೆ ಮನವಿ ಮಾಡಿದ್ದೆವು.

ಬೆಳಗಾವಿ: ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆಲಿಕಾಪ್ಟರ್, ವಿಶೇಷ ವಿಮಾನ ಖರೀದಿ ಮಾಡಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಹೆಲಿಕಾಪ್ಟರ್, ವಿಶೇಷ ವಿಮಾನ ಸೇವೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸಮಿತಿಯು ಬೆಳಗಾವಿ ಸುವರ್ಣಸೌಧದಲ್ಲಿ ಮಂಗಳವಾರ ಸಭೆ ಸೇರಿ ಸಮಾಲೋಚನೆ ನಡೆಸಿತು. ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಹೆಲಿಕಾಪ್ಟರ್ ಸೇವೆ ಒದಗಿಸುವಂತೆ ನಾವು ಹೆಚ್ಎಎಲ್ ಗೆ ಕೇಳಿದ್ದೆವು. ಅವರು ಇನ್ನೂ ತಡವಾಗುತ್ತದೆ ಎಂದು ಹೇಳಿದರು. ಹೆಚ್ ಎ ಎಲ್ ನಲ್ಲೇ ಹೆಲಿಕಾಪ್ಟರ್ ತಯಾರು ಮಾಡಲಾಗುತ್ತಿದೆ. ಏರ್ ಶೋ ವೇಳೆ ನಾನು, ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ನೋಡಿದ್ದೆವು.

ಅಲ್ಲಿನ ಹೆಲಿಕಾಪ್ಟರ್ ಚೆನ್ನಾಗಿತ್ತು. ಅವರೇ ನಿರ್ವಹಣೆ ಮಾಡುತ್ತಾರೆ. ಹೀಗಾಗಿ ಅವರ ಸೇವೆಗೆ ಮನವಿ ಮಾಡಿದ್ದೆವು. ಸೇವೆ ಒದಗಿಸುವುದು ತಡವಾಗುವ ಕಾರಣ ಅವರೇ ಒಂದು ಸಂಸ್ಥೆಯನ್ನು ಶಿಫಾರಸ್ಸು ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಇದಕ್ಕೆ ಟೆಂಡರ್ ಕರೆಯಲಾಗಿದ್ದು, ಕೆಲವರು ಭಾಗಿಯಾಗಿದ್ದಾರೆ. ಹೀಗಾಗಿ ಸಂಪುಟ ಉಪಸಮಿತಿ ಸದಸ್ಯರಾದ ಸಚಿವರಾದ ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್ ಹಾಗೂ ಅಧಿಕಾರಿಗಳು ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಮುಂದಿನ ಸೋಮವಾರ ಅಥವಾ ಮಂಗಳವಾರ ಮತ್ತೊಂದು ಸಭೆ ಮಾಡುತ್ತೇವೆ.

ಇದಕ್ಕೆ ತಾಂತ್ರಿಕವಾಗಿ ಪರಿಣಿತಿ ಹೊಂದಿರುವವರು ಬೇಕು. ಬೇರೆ ಸರ್ಕಾರಗಳಿಗೆ ಉತ್ತಮ ಸೇವೆ ನೀಡಿರುವಂತಹವರನ್ನು ನಾವು ಪರಿಗಣಿಸುತ್ತೇವೆ. ನಮಗೆ ಸುರಕ್ಷತೆ ಹಾಗೂ ಸರ್ಕಾರದ ಹಣ ಎರಡೂ ಮುಖ್ಯ" ಎಂದು ತಿಳಿಸಿದರು. ಸಭೆಯಲ್ಲಿ ಸಚಿವರು ತಮ್ಮ ಅನುಭವಗಳ ಆಧಾರದ ಮೇಲೆ ಸಲಹೆ ನೀಡಿದ್ದಾರೆ. ಹೀಗಾಗಿ ಖರೀದಿ ಮಾಡದಿರಲು ತೀರ್ಮಾನಿಸಲಾಗಿದ್ದು, ಗಂಟೆಗಳ ಲೆಕ್ಕದಲ್ಲಿ ಬಾಡಿಗೆಗೆ ಪಡೆಯಲಾಗುವುದು" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: CM ಬಗ್ಗೆ ಬೈರತಿ ಗುಣಗಾನ; ಯತೀಂದ್ರ ಹೇಳಿಕೆಗೆ ಕೆರಳಿ ಕೆಂಡವಾದ ಡಿಕೆಶಿ ಬಣ!

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

SCROLL FOR NEXT