ಸಚಿವ ಎಚ್. ಕೆ. ಪಾಟೀಲ್ 
ರಾಜ್ಯ

ಬಾಡಿಗೆದಾರರಿಗೆ ಸಿಹಿ ಸುದ್ದಿ: ಕರ್ನಾಟಕ 'ಬಾಡಿಗೆ ತಿದ್ದುಪಡಿ ವಿಧೇಯಕ 2025' ವಿಧಾನಸಭೆಯಲ್ಲಿ ಮಂಡನೆ!

ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕ-2025ನ್ನು ಮಂಡಿಸಿದರು.

ಬೆಳಗಾವಿ: ಬೆಂಗಳೂರಿನಂತಹ ನಗರಗಳಲ್ಲಿ ಬಾಡಿಗೆ ಮನೆಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಘರ್ಷಣೆಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಲು ಮತ್ತು ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಕರ್ನಾಟಕ ಬಾಡಿಗೆ ತಿದ್ದುಪಡಿಯನ್ನು ತರಲು ಮುಂದಾಗಿದೆ.

ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕ-2025ನ್ನು ಮಂಡಿಸಿದರು.

ರಾಜ್ಯದಲ್ಲಿ ಬಾಡಿಗೆ ಮನೆಗಳ ನಿಯಮಗಳನ್ನು ಬದಲಾಯಿಸಲು ಸರ್ಕಾರ ಮುಂದಾಗಿದ್ದು, ಕರ್ನಾಟಕ ಬಾಡಿಗೆ ಕಾಯ್ದೆ 1999ಕ್ಕೆ ತಿದ್ದುಪಡಿ ತರಲು ನಿರ್ಧರಿಸಿದೆ. ಈ ತಿದ್ದುಪಡಿಯಿಂದ ಬಾಡಿಗೆ ಮನೆಗಳಲ್ಲಿ ವಾಸ ಮಾಡುವವರು ಹಾಗೂ ಮನೆ ಮಾಲೀಕರು ಇಬ್ಬರಿಗೂ ಹೊಸ ನಿಯಮಗಳು ಅನ್ವಯ ಆಗುತ್ತವೆ.

ಹೊಸ ನಿಯಮದಂತೆ ಬಾಡಿಗೆದಾರರಿಗೆ ಮಾತ್ರವಲ್ಲ, ಮಾಲೀಕರಿಗೂ ನಿಯಮ ಉಲ್ಲಂಘಿಸಿದರೆ ದೊಡ್ಡ ಮೊತ್ತದ ದಂಡ ಬೀಳಲಿದೆ. ಬೆಂಗಳೂರಿನಂತಹ ನಗರಗಳಲ್ಲಿ ಬಾಡಿಗೆ ಮನೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಮನೆ ಮಾಲೀಕರು ಹಾಗೂ ಬಾಡಿಗೆದಾರರ ನಡುವೆ ಜಗಳಗಳು ಕೂಡಾ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ವಿಧೇಯಕದಲ್ಲಿ ಬಾಡಿಗೆದಾರರು ಮತ್ತು ಮನೆ ಮಾಲೀಕರ ನಡುವಿನ ವಿವಾದಗಳನ್ನು ಬಗೆಹರಿಸಲು, ಪಾರದರ್ಶಕತೆ ತರಲು ಪ್ರಮುಖ ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ.

ಈ ತಿದ್ದುಪಡಿಯಿಂದ ಬಾಡಿಗೆ ಮನೆಗಳಲ್ಲಿ ವಾಸಿಸುವವರು ಮತ್ತು ಮನೆ ಮಾಲೀಕರು ಇಬ್ಬರಿಗೂ ಹೊಸ ನಿಯಮಗಳು ಅನ್ವಯಿಸುತ್ತವೆ. ಮುಖ್ಯವಾಗಿ, ಬಾಡಿಗೆ ಮನೆಯನ್ನು ಮಾಲೀಕರ ಅನುಮತಿ ಇಲ್ಲದೆ ಬೇರೆಯವರಿಗೆ ಬಾಡಿಗೆಗೆ ನೀಡಿದರೆ, ಈಗಿನ ದಂಡದ ಮೊತ್ತವನ್ನು 5000 ರೂಪಾಯಿಯಿಂದ 50,000 ರೂ.ಗೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ. ಇದು ಶೇಕಡಾ 90ರಷ್ಟು ಹೆಚ್ಚಳವಾಗಲಿದೆ.

ಅನಧಿಕೃತವಾಗಿ ಕಾರ್ಯನಿರ್ವಹಿಸುವ ಬ್ರೋಕರ್‌ಗಳಿಗೂ ಸರ್ಕಾರ ಬಿಸಿ ಮುಟ್ಟಿಸಲಿದೆ. ಕಾಯ್ದೆಯ ಸೆಕ್ಷನ್ 20ರ ಅಡಿಯಲ್ಲಿ ನೋಂದಣಿ ಮಾಡಿಸದ ಬ್ರೋಕರ್‌ಗಳಿಗೆ ದಿನಕ್ಕೆ 25000 ರೂ. ದಂಡ ವಿಧಿಸಲಾಗುತ್ತದೆ. ಈ ಮೊದಲು, ಇದು 2000 ರೂಪಾಯಿ ಇತ್ತು. ಮತ್ತೆ ಮತ್ತೆ ತಪ್ಪು ಮಾಡಿದರೆ, ದಿನಕ್ಕೆ 20000 ರೂಪಾಯಿ ಹೆಚ್ಚುವರಿ ದಂಡ ಬೀಳುತ್ತದೆ.

ಬಾಡಿಗೆ ಒಪ್ಪಂದಗಳನ್ನು ಆನ್‌ಲೈನ್‌ನಲ್ಲಿ ನೋಂದಾಯಿಸಲು ಸರ್ಕಾರವು ಪೋರ್ಟಲ್ ಪ್ರಾರಂಭಿಸಿದೆ. ಇದರಿಂದ ಬಾಡಿಗೆಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಕಡಿಮೆ ಮಾಡಬಹುದು. ಅಲ್ಲದೆ, ಬಾಡಿಗೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಪಾಡಬಹುದು. ನಗರ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಅನೌಪಚಾರಿಕ ಒಪ್ಪಂದಗಳು ನಡೆಯುತ್ತವೆ. ಇವುಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಮನೆ ಮಾಲೀಕರು ಬಾಡಿಗೆದಾರರನ್ನು ಮನೆಯಿಂದ ಹೊರಹಾಕುವ ಮೊದಲು, ಸೂಕ್ತ ನೋಟಿಸ್ ನೀಡಬೇಕು. ಇದರಿಂದ ಬಾಡಿಗೆದಾರರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬಹುದು. ಕಡಿಮೆ ಬಾಡಿಗೆಗೆ ಮನೆ ನೀಡುವವರಿಗೆ ಸರ್ಕಾರ ತೆರಿಗೆ ವಿನಾಯಿತಿ ಮತ್ತು ಸಬ್ಸಿಡಿ ನೀಡಲು ಚಿಂತಿಸುತ್ತಿದೆ. ಇದರಿಂದ ಕಡಿಮೆ ಬೆಲೆಯ ಮನೆಗಳು ಲಭ್ಯವಾಗುವಂತೆ ನೋಡಿಕೊಳ್ಳಬಹುದು.ಬಾಡಿಗೆಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಬೇಗನೆ ಇತ್ಯರ್ಥಪಡಿಸಲು, ಫಾಸ್ಟ್ ಟ್ರ್ಯಾಕ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಇದರಿಂದ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಬೇಗನೆ ಮುಗಿಸಬಹುದು. ಮನೆ ಮಾಲೀಕರು ಮತ್ತು ಬಾಡಿಗೆದಾರರು ಇಬ್ಬರಿಗೂ ಇದು ಅನುಕೂಲವಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

ಪಶ್ಚಿಮ ಬಂಗಾಳ ಬಿಟ್ಟು ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಿಸಿದ ಚುನಾವಣಾ ಆಯೋಗ!

SCROLL FOR NEXT