ಕಲ್ಲಡ್ಕ ಪ್ರಭಾಕರ್ ಭಟ್ 
ರಾಜ್ಯ

ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು!

ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪೋತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪುತ್ತೂರು: ದ್ವೇಷ ಭಾಷಣ ಪ್ರಕರಣದಲ್ಲಿ ಆರ್ ಎಸ್ ಎಸ್ ಮುಖಂಡ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.

ತಾಲ್ಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪೋತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ನಿರೀಕ್ಷಣಾ ಜಾಮೀನು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಡಿ.5 ರಂದು ಪೂರ್ಣಗೊಳಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಆಕ್ಷೇಪವನ್ನು ಪರಿಗಣಿಸದ ನ್ಯಾಯಾಲಯ ಪ್ರಭಾಕರ್ ಭಟ್ ಅವರ ಜಾಮೀನು ನೀಡಿದೆ. ಪ್ರಭಾಕರ್ ಭಟ್ ಅವರ ಪರವಾಗಿ ವಕೀಲ ಕೆಜೆ ಮಹೇಶ್ ವಾದ ಮಂಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್