ಸಾಂದರ್ಭಿಕ ಚಿತ್ರ  
ರಾಜ್ಯ

ದೇವನಹಳ್ಳಿ: ಕಾರು-KSRTC ಬಸ್ ಮಧ್ಯೆ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಕಳೆದ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಅತಿವೇಗದಲ್ಲಿ ಸಂಚರಿಸುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​​ ಹಾರಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್‌ಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತಪಟ್ಟವರನ್ನು ಮೋಹನ್ ಕುಮಾರ್ (33ವ), ಸುಮನ್ (28ವ), ಸಾಗರ್ (23ವ) ಎಂದು ಗುರುತಿಸಲಾಗಿದೆ. ಇವರೆಲ್ಲ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ನಿವಾಸಿಗಳು.

ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅತಿವೇಗದ ಚಾಲನೆ ಈ ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ