ಮೃತ ರಾಜೇಶ್ - ರೇವಣ್ಣ ಪುತ್ರನ ಕಾರು 
ರಾಜ್ಯ

ಮಾಗಡಿ: ಮಾಜಿ ಸಚಿವ ಎಚ್.ಎಂ ರೇವಣ್ಣ ಪುತ್ರನ ಕಾರು ಅಪಘಾತ, ಬೈಕಿಗೆ ಡಿಕ್ಕಿ; ಯುವಕ ಸಾವು

ಘಟನೆ ವೇಳೆ ರೇವಣ್ಣ ಪುತ್ರ ಶಶಾಂಕ್ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ನಿರಾಕರಿಸಿದ ರೇವಣ್ಣ, ನನ್ನ ಪುತ್ರನ ಕಾರು ಅಪಘಾತವಾಗಿದ್ದು ನಿಜ. ಆದರೆ ಚಾಲಕ ಕಾರು ಚಲಾಯಿಸುತ್ತಿದ್ದರು ಎಂದು ಹೇಳಿದ್ದಾರೆ.

ರಾಮನಗರ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್ಎಂ ರೇವಣ್ಣ ಅವರ ಪುತ್ರ ಆರ್. ಶಶಾಂಕ್‌ ಪ್ರಯಾಣಿಸತ್ತಿದ್ದ ಕಾರು ಗುರುವಾರ ತಡ ರಾತ್ರಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕು ಗುಡೇಮಾರನಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆ ವೇಳೆ ರೇವಣ್ಣ ಪುತ್ರ ಶಶಾಂಕ್ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ನಿರಾಕರಿಸಿದ ರೇವಣ್ಣ, ನನ್ನ ಪುತ್ರನ ಕಾರು ಅಪಘಾತವಾಗಿದ್ದು ನಿಜ. ಆದರೆ ಚಾಲಕ ಕಾರು ಚಲಾಯಿಸುತ್ತಿದ್ದರು ಎಂದು ಹೇಳಿದ್ದಾರೆ.

ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್(27) ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, KA 51 MQ 0555 ನಂಬರ್‌ನ ಕಾರು ಡಿಕ್ಕಿಯಾದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕಾರು ಆರ್. ಶಶಾಂಕ್ ಅವರ ಹೆಸರಿನಲ್ಲಿರುವುದು ದೃಢಪಟ್ಟಿದೆ.

ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video