ಶಕುನಿ ಗೌಡ 
ರಾಜ್ಯ

ಹಾಸನ ಹೆದ್ದಾರಿಯಲ್ಲಿ ಘೋರ ದುರಂತ: ಕರ್ತವ್ಯ ನಿರತ KSRTC ಚೆಕಿಂಗ್ ಇನ್ಸ್ ಪೆಕ್ಟರ್ ತಲೆ ಮೇಲೆ ಹರಿದ ಲಾರಿ; ಶಕುನಿಗೌಡ ಸ್ಥಳದಲ್ಲೇ ಸಾವು

ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ಕರ್ತವ್ಯ ನಿರತ ಕೆಎಸ್‌ಆರ್‌ಟಿಸಿ ಚೆಕಿಂಗ್ ಇನ್ಸ್‌ಪೆಕ್ಟರ್ ಶಕುನಿಗೌಡ ಲಾರಿ ಡಿಕ್ಕಿಯಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬಸ್ ತಪಾಸಣೆ ವೇಳೆ ಈ ದುರಂತ ಸಂಭವಿಸಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

ಹಾಸನ: ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ ಕೆಎಸ್ ಆರ್ ಟಿಸಿ ಬಸ್ ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ನಡೆದಿದೆ.

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ.

ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಏಕಾಏಕಿ ವೇಗವಾಗಿ ಬಂದ ಲಾರಿ ಅವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಢಿಕ್ಕಿ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಶಕುನಿಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!

ಯುಗಾದಿ ಹಬ್ಬದಂದೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಂಗಳೂರಿನಲ್ಲಿ ಇಂದಿನ ದರವೆಷ್ಟು?

Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ರೂ ನಷ್ಟ!

North Korea Election: ಇತಿಹಾಸದಲ್ಲೇ ಮೊದಲು; Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ

KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!

SCROLL FOR NEXT