ಎಂ.ಬಿ ಪಾಟೀಲ್ 
ರಾಜ್ಯ

ಬೆಳಗಾವಿಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಭೂಮಿ ಗುರುತು: ಎಂ.ಬಿ ಪಾಟೀಲ್

ಬೆಳಗಾವಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅನೇಕ ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿಸುತ್ತಿದ್ದಾರೆ, ಈ ವಿಷಯವನ್ನು ಅಂತಿಮಗೊಳಿಸಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.

ಬೆಳಗಾವಿ: ಕರ್ನಾಟಕದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ವಲಯ ಸೇರಿದಂತೆ ಕೈಗಾರಿಕೆಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್, ಬೆಳಗಾವಿಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಸೂಕ್ತವಾದ ಭೂಮಿಯನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಅರವಿಂದ ಬೆಲ್ಲದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅನೇಕ ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿಸುತ್ತಿದ್ದಾರೆ, ಈ ವಿಷಯವನ್ನು ಅಂತಿಮಗೊಳಿಸಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ರಕ್ಷಣಾ ಕಾರಿಡಾರ್‌ಗಳನ್ನು ಸ್ಥಾಪಿಸುವ ಬಗ್ಗೆ, ಸರ್ಕಾರವು ಈ ಉದ್ದೇಶಕ್ಕಾಗಿ ಕರ್ನಾಟಕದಲ್ಲಿ ಎರಡು ವಲಯಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ ಎಂದು ಅವರು ಹೇಳಿದರು. ಒಂದು ವಲಯವು ಬೆಳಗಾವಿ, ಧಾರವಾಡ ಮತ್ತು ವಿಜಯಪುರ ನಡುವಿನ ಮಾರ್ಗ ಮತ್ತು ಎರಡನೇ ವಲಯವು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ನಡುವಿನ ಮಾರ್ಗವನ್ನು ಒಳಗೊಂಡಿದೆ ಎಂದರು.

ಈ ಪ್ರಸ್ತಾವನೆಗೆ ಕೇಂದ್ರದ ಅನುಮೋದನೆ ಕೋರಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಈಗಾಗಲೇ ಭೇಟಿ ಮಾಡಿದ್ದೇನೆ ಎಂದು ಪಾಟೀಲ್ ತಿಳಿಸಿದರು. ಇದಕ್ಕೆ, ಸರ್ಕಾರವು ಕೇವಲ ಒಂದು ವಲಯವನ್ನು ಮಾತ್ರ ಗುರುತಿಸಿ, ಸುಲಭ ಅನುಮತಿಗಾಗಿ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸುವಂತೆ ಬೆಲ್ಲದ್ ಸೂಚಿಸಿದರು.

ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಸರ್ಕಾರವು ಒಂದೇ ವಲಯವನ್ನು ಪ್ರಸ್ತಾಪಿಸಿದರೆ ನಿರ್ಧಾರ ತೆಗೆದುಕೊಳ್ಳುವುದು ಸುಲಭ ಎಂದು ಅವರು ನನಗೆ ಹೇಳಿದರು. ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಕೊರತೆಯಿರುವುದರಿಂದ, ಸರ್ಕಾರವು ಈ ಪ್ರದೇಶವನ್ನು ಮಾತ್ರ ಪ್ರಸ್ತಾವನೆಗೆ ವಲಯವಾಗಿ ಪರಿಗಣಿಸಬೇಕು" ಎಂದು ಅವರು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಅವರಿಗೆ ವಿಶೇಷ ಪ್ರೋತ್ಸಾಹ ಧನ ನೀಡಬೇಕೆಂದು ಬೆಲ್ಲದ್ ಸರ್ಕಾರವನ್ನು ಒತ್ತಾಯಿಸಿದಾಗ, ಹೊಸ ಕೈಗಾರಿಕಾ ನೀತಿಯ ಪ್ರಕಾರ, ಸರ್ಕಾರವು ಈಗಾಗಲೇ ಈ ಪ್ರದೇಶಕ್ಕೆ ವಿಶೇಷ ಪ್ರೋತ್ಸಾಹ ಧನ ನೀಡುತ್ತಿದೆ ಎಂದು ಪಾಟೀಲ್ ಹೇಳಿದರು.

ಪ್ರಾದೇಶಿಕ ಅಸಮತೋಲನದ ಕುರಿತಾದ ನಂಜುಂಡಪ್ಪ ವರದಿಯ ಆಧಾರದ ಮೇಲೆ, ಸರ್ಕಾರವು ಅತ್ಯಂತ ಹಿಂದುಳಿದ ಜಿಲ್ಲೆಗಳು ಮತ್ತು ತಾಲ್ಲೂಕುಗಳಿಗೆ 5% ಮತ್ತು ಹೆಚ್ಚು ಹಿಂದುಳಿದ ಜಿಲ್ಲೆಗಳು ಮತ್ತು ತಾಲ್ಲೂಕುಗಳಿಗೆ 3% ಪ್ರೋತ್ಸಾಹ ಧನ ನೀಡುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA, ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

ರಾಮ ಜನ್ಮಭೂಮಿ ಚಳವಳಿಯ ಪ್ರಮುಖ ನಾಯಕ ರಾಮವಿಲಾಸ್ ವೇದಾಂತಿ ವಿಧಿವಶ!

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

ಶಾಕ್ ಕೊಟ್ಟ BCCI, ರೋ-ಕೋ ಮಾತ್ರವಲ್ಲ.. ಟೀಂ ಇಂಡಿಯಾದ ಎಲ್ಲ ಆಟಗಾರರಿಗೂ 'ವಿಜಯ್ ಹಜಾರೆ' ಕಡ್ಡಾಯ

ಕೊಪ್ಪಳ: ಶಾಲಾ ಬಿಸಿಯೂಟದಲ್ಲಿ ಹುಳು ಪತ್ತೆ, ಹೆಡ್ ಮಾಸ್ಟರ್ ಗೆ ಶೋಕಾಸ್ ನೋಟಿಸ್! Video

SCROLL FOR NEXT