ಸಂತ್ರಸ್ತ ಮಹಿಳೆ 
ರಾಜ್ಯ

ಮಡಿಕೇರಿ: Facebook ಗೆಳತಿ ಮಾತು ನಂಬಿ ರೂಂಮಿಗೆ ಬಂದ ಯುವಕ; ಅರೆಬೆತ್ತಲಾಗಿ ನಡುರಸ್ತೆಯಲ್ಲಿ ಓಡಿದ್ದು ನೋಡಿ ದಂಗಾದ ಜನ!

ಫೇಸ್‌ಬುಕ್‌ನಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಮಂಡ್ಯದಿಂದ ಮಡಿಕೇರಿಗೆ ಹೋಗಿದ್ದ ವ್ಯಕ್ತಿಯೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಹಣ ಹಾಗೂ ವಸ್ತುಗಳನ್ನು ಕಳೆದುಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿ: ಫೇಸ್‌ಬುಕ್‌ನಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಮಂಡ್ಯದಿಂದ ಮಡಿಕೇರಿಗೆ ಹೋಗಿದ್ದ ವ್ಯಕ್ತಿಯೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಹಣ ಹಾಗೂ ವಸ್ತುಗಳನ್ನು ಕಳೆದುಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಹೇಶ್ ಎಂಬಾತ ಒಬ್ಬನೇ ಬಂದಿರುವುದನ್ನು ಗಮನಿಸಿದ ಮಹಿಳೆ ಮಡಿಕೇರಿಯ ಮಂಗಳಾದೇವಿ ನಗರದ ಮನೆಯೊಂದಕ್ಕೆ ಕರೆಸಿಕೊಂಡಿದ್ದಾಳೆ.

ಕೆಲಹೊತ್ತು ಮಹೇಶನ ಜೊತೆ ಪಾನೀಯ ಸೇವಿಸಿದ ಮಹಿಳೆ ಸಂಬಂಧಿಕರೊಬ್ಬರು ಮೃತಪಟ್ಟಿರುವುದಾಗಿ ತುರ್ತು ಕರೆಬಂದಿದ್ದಾಗಿ ಹೇಳಿ ಅಲ್ಲಿಂದ ಹೊರಬಂದಿದ್ದಾಳೆ. ಅದೇ ಸಮಯದಲ್ಲಿ ಮನೆಗೆ ನುಗ್ಗಿದ ನಾಲ್ವರು ಯುವಕರು ಮಹೇಶ ಬಳಿ ಇದ್ದ ಹಣ ಹಾಗೂ ವಸ್ತುಗಳನ್ನು ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿ ಕೂಡಿಹಾಕಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಮಧ್ಯೆ ಶೌಚಕ್ಕೆ ಹೋಗುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಅರಬೆತ್ತಲೆಯಲ್ಲೇ ಓಡಿ ಹೋಗಿ ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಕೃತ್ಯವನ್ನು ಹನಿಟ್ರ್ಯಾಪ್ ಪ್ರಕರಣವೆಂದು ಪರಿಗಣಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ, ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

IPL 2026: RCB vs PBKS ಪಂದ್ಯದಲ್ಲಿ ಎರಡು ಭಾರೀ ದಾಖಲೆ ನಿರ್ಮಿಸಿದ Virat Kohli

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ಬೆಂಗಳೂರು- ಮುಂಬೈ ನಡುವಿನ ಹೊಸ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ: ಶೀಘ್ರದಲ್ಲೇ ವಂದೇ ಭಾರತ್ ರೈಲು ಸೇವೆ ಆರಂಭ- ಅಶ್ವಿನಿ ವೈಷ್ಣವ್

SCROLL FOR NEXT