ಪಬ್ ನಲ್ಲಿ ಗಲಾಟೆ 
ರಾಜ್ಯ

ನಟಿ Shilpa Shetty ಒಡೆತನದ ಪಬ್ ನಲ್ಲಿ ಹೈಡ್ರಾಮಾ: ಸಿಬ್ಬಂದಿ ಮೇಲೆ ಉದ್ಯಮಿ ಹಲ್ಲೆ, Video

ಗುರುವಾರ ರಾತ್ರಿ 1.30 ಸುಮಾರಿಗೆ ಈ ಘಟನೆ ನಡೆದಿದ್ದು, ಪಬ್‌ನಲ್ಲಿ ಸರ್ವಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ..

ಬೆಂಗಳೂರು: ಬೆಂಗಳೂರಿನಲ್ಲಿರುವ ನಟಿ ಶಿಲ್ಪಾಶೆಟ್ಟಿ ಒಡೆತನದ ಪಬ್ ನಲ್ಲಿ ಹೈಡ್ರಾಮಾ ನಡೆದಿದ್ದು, ಪಬ್ ಸಿಬ್ಬಂದಿ ಮೇಲೆ ಉದ್ಯಮಿಯೊಬ್ಬರು ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ.

ಬೆಂಗಳೂರು ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾಶೆಟ್ಟಿ ಒಡೆತನದ 'ಬ್ಯಾಸ್ಟಿಯನ್' ಪಬ್‌ನಲ್ಲಿ ಗಲಾಟೆ ನಡೆದಿದ್ದು, 2 ದಿನಗಳ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ ಗುರುವಾರ ರಾತ್ರಿ 1.30 ಸುಮಾರಿಗೆ ಈ ಘಟನೆ ನಡೆದಿದ್ದು, ಪಬ್‌ನಲ್ಲಿ ಸರ್ವಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ.

ಉದ್ಯಮಿಯೊಬ್ಬರು ಪಬ್ ಸಿಬ್ಬಂದಿಗಳ ಜೊತೆ ವಾಗ್ವಾದ ನಡೆಸಿದ್ದು ಈ ವೇಳೆ ಸಿಬ್ಬಂದಿಗಳ ವಿರುದ್ದ ಆವಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸಿಬ್ಬಂದಿ ಹಾಗೂ ಉದ್ಯಮಿ ನಡುವೆ ವಾಗ್ವಾದ ನಡೆದು, ಪಬ್​​​ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಪಬ್‌ ಮುಚ್ಚುವ ಸಮಯದಲ್ಲಿ ಈ ಗಲಾಟೆ ನಡೆದಿದೆ. ಪಬ್‌ನಲ್ಲಿ ಸರ್ವಿಸ್ ನೀಡುವ ವಿಚಾರಕ್ಕೆ ಉದ್ಯಮಿ ಸಿಬ್ಬಂದಿಗಳ ಮೇಲೆ ಸಿಟ್ಟಾಗಿದ್ದಾರೆ. ಈ ವೇಳೆ ಸಿಬ್ಬಂದಿಗಳು ತುಂಬಾ ತಾಳ್ಮೆಯಿಂದ, ಅವರನ್ನು ಸಮಾಧಾನ ಮಾಡಲು ಮುಂದಾಗಿದ್ದಾರೆ.

ಆದರೆ ಉದ್ಯಮಿ ಮಾತು ಕೇಳದೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯ ವೇಳೆ ಉದ್ಯಮಿ ಅತಿಯಾಗಿ ಮದ್ಯಪಾನ ಮಾಡಿದ್ದರು ಎಂದು ಹೇಳಲಾಗಿದೆ. ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದನ್ನು ತಡೆಯಲು ಪಬ್‌ನ ಬೌನ್ಸರ್‌ಗಳು ಪ್ರಯತ್ನಿಸಿದ್ದಾರೆ.

ವಿಡಿಯೋ ವೈರಲ್

ಪಬ್ ನಲ್ಲಿ ನಡೆದ ಗಲಾಟೆ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಪೊಲೀಸ್ ದೂರು, ತನಿಖೆ

ಇನ್ನು ಗಲಾಟೆಯ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಇದೀಗ ಪೊಲೀಸರು ಸ್ವತಃ ಪಬ್​​​​​​​​ಗೆ ಬಂದು ಮಾಹಿತಿ ಕಲೆಹಾಕಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಗೆ ಈ ಗಲಾಟೆ ಬಗ್ಗೆ ವಿಡಿಯೋವೊಂದು ಸಿಕ್ಕಿದೆ, ಅದರ ಆಧಾರ ಮೇಲೆ ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ', ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas pai ಆಗ್ರಹ!

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!

ಟೆನಿಸ್ ದಿಗ್ಗಜ ಜೊಕೊವಿಕ್ ರನ್ನು ಸೋಲಿಸಿ ಇತಿಹಾಸ ಸೃಷ್ಟಿ: ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಅಲ್ಕರಾಜ್

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಬಜೆಟ್ 2026-27: ವಿದೇಶಿ ನೆರವಿನಲ್ಲಿ ಮಹತ್ತರ ಬದಲಾವಣೆ, ಬಾಂಗ್ಲಾದೇಶಕ್ಕೆ ಅರ್ಧದಷ್ಟು ನೆರವು ಕಡಿತ!

SCROLL FOR NEXT