ಮನೆಯಲ್ಲಿಟ್ಟಿದ್ದ ಪಾತ್ರೆಗಳು ಕೆಳಗೆ ಬಿದ್ದಿರುವುದು. 
ರಾಜ್ಯ

ದಾವಣಗೆರೆಯಲ್ಲಿ ನಿಗೂಢ ಶಬ್ಧ: ಭೂಮಿ ಕಂಪಿಸಿದ ಅನುಭವ, ಜನರಲ್ಲಿ ಆತಂಕ

ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಶನಿವಾರ ರಾತ್ರಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಭೂಮಿ ಕಂಪಿಸಿದ ಅನುಭವವೂ ಆಗಿದೆ ಎಂದು ತಿಳಿದುಬಂದಿದೆ.

ಚಿಕ್ಕಮಲ್ಲನಹೊಳೆ ಗ್ರಾಮವು ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗಳ ಗಡಿಭಾಗದಲ್ಲಿದ್ದು, ನಿಗೂಢ ಶಬ್ಧಕ್ಕೆ ಜನತೆ ಬೆಚ್ಚಿದಬಿದ್ದು ಮನೆ, ಇತರೆ ಸ್ಥಳಗಳಿಂದ ಹೊರಗೆ ಓಡಿ ಬಂದಿದ್ದಾರೆ.

ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಘಟನೆಯ ಕುರಿತು ಜಗಳೂರು ತಹಸೀಲ್ದಾರ್ ಸಯ್ಯದ್ ಕಲೀಂವುಲ್ಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ. ಆದರೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಳ್ಳಿ ಕಡೆಯಿಂದ ಸ್ಫೋಟದ ಶಬ್ದದ ಅನುಭವ ಆಗಿರುವ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.

ಗ್ರಾಮಸ್ಥರು ಗೊಂದಲಕ್ಕೊಳಗಾಗುವುದು ಬೇಡ. ಸ್ಥಳಕ್ಕೆ ಗ್ರಾಮಲೆಕ್ಕಿಗರು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ. ಜಗಳೂರು ತಾಲೂಕಿನ ಜನರು ಯಾವುದೇ ಭಯಪಡುವ ಅಗತ್ಯವಿಲ್ಲ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!