ಡಿ.ಕೆ. ಶಿವಕುಮಾರ್ 
ರಾಜ್ಯ

ದೆಹಲಿ ಪೊಲೀಸ್ ನೋಟೀಸ್: ಸಮಯ ಕೊಟ್ಟರೆ ಅಧಿವೇಶನ ಬಳಿಕ ಉತ್ತರಿಸಲು ಬರುವೆ; ಡಿ.ಕೆ ಶಿವಕುಮಾರ್

ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ತಿಳಿಸಿದರು.

ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ತಿಳಿಸಿದರು.

ಪೊಲೀಸರು ನೀಡಿರುವ ನೋಟಿಸ್ ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ ಎಂದು ತಿಳಿಸಿದರು.

ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲ, ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ ಎಂದು ತಿಳಿಸಿದರು.

ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು ಎಂದರು. ಅಧಿವೇಶನ ಮುಗಿದ ಬಳಿಕ ಮತ್ತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷದಲ್ಲಿ ನಮ್ಮ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್

'ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆಯೇ?'

ನಮಗೆ ಬಂದಿರುವುದು ಪಿತ್ರಾರ್ಜಿತ ಆಸ್ತಿ, ಇಲ್ಲದಿರುವುದು ಹುಡುಕಿ ಆರೋಪ ಮಾಡುವುದು ಅವರ ಸಂಸ್ಕೃತಿ: BJP ವಿರುದ್ಧ ಕೃಷ್ಣ ಬೈರೇಗೌಡ ಸಿಡಿಮಿಡಿ

ಬೆಳಗಾವಿ ಅಧಿವೇಶನ ಮಧ್ಯೆ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರುಪೇರು: ಈಗ ಸಿಎಂ ಸಿದ್ದರಾಮಯ್ಯ ಹೇಗಿದ್ದಾರೆ?

ಮಹಾರಾಷ್ಟ್ರ: ಸಚಿವ ಸ್ಥಾನಕ್ಕೆ ಮಾಣಿಕ್​ರಾವ್ ಕೊಕಾಟೆ ರಾಜೀನಾಮೆ!

SCROLL FOR NEXT