ವಿಧಾನಸಭೆಯಲ್ಲಿ ಶಾಮನೂರು ಶಿವಶಂಕರಪ್ಪಗೆ ಸಂತಾಪ 
ರಾಜ್ಯ

ಬೆಳಗಾವಿ ಅಧಿವೇಶನ: ಶಾಮನೂರು ಶಿವಶಂಕರಪ್ಪಗೆ ಸಂತಾಪ; ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಸಂತಾಪ ಸೂಚಿಸಿ,ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದರು.

ಬೆಳಗಾವಿ: ಭಾನುವಾರ ನಿಧನರಾದ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸೋಮವಾರ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಸಂತಾಪ ಸೂಚಿಸಲಾಯಿತು.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಶಾಮನೂರು ಶಿವಶಂಕರಪ್ಪಗೆ ಅವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡುಲಾಯಿತು.

ವಿಧಾನಸಭೆಯಲ್ಲಿ ಸಂತಾಪ ಸೂಚನೆ ನಿರ್ಣಯ ಮಂಡಿಸಿ ಮಾತನಾಡಿದ ಸ್ವೀಕರ್ ಯು.ಟಿ.ಖಾದರ್ ಅವರು, ಎಷ್ಟೇ ಜಟಿಲವಾದ ಸಮಸ್ಯೆಯನ್ನು ತಾಳ್ಮೆಯಿಂದ ನಿಭಾಯಿಸುವ ಗುಣ ಶಾಮನೂರು ಅವರಲ್ಲಿತ್ತು. ಅವರ ಜೀವನವೇ ಒಂದು ಸಂದೇಶ ಎಂದು ಬಣ್ಣಿಸಿದರು.

ಬಳಿಕ ಸಂತಾಪ ಸೂಚಿಸಿ,ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ. ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲದ ರಾಜಕೀಯದಲ್ಲಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು ಎಂದರು.

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಿವಶಂಕರಪ್ಪ ಅವರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು, ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದೆ, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದೆ. ನನ್ನ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದೆ, ಅದಕ್ಕೂ ಸಾಕಷ್ಟು ಸಹಕಾರ ನೀಡಿದ್ದರು ಎಂದರು.

ಶಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು.

ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರು ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು, ಭಗವಂತ ಅವರೆಲ್ಲರಿಗೂ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಪ್ರಾರ್ಥಿಸುತ್ತೇನೆ.

ನಂತರ ಸ್ಪೀಕರ್ ಯುಟಿ ಖಾದರ್ ಅವರು ವಿಧಾನಸಭೆ ಕಲಾಪವನ್ನು ನಾಳೆಗೆ ಮುಂದೂಡಿದರು. ಅಂತಿಮ ದರ್ಶನ ಪಡೆಯಲು ಯುಟಿ ಖಾದರ್ ಸೇರಿದಂತೆ ಬೆಳಗಾವಿಯಿಂದ ಹಲವು ಸಚಿವರು, ಶಾಸಕರು ದಾವಣಗೆರೆಯತ್ತ ಪ್ರಯಾಣ ಬೆಳೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರದ ಉಧಂಪುರ್ ನಲ್ಲಿ ಎನ್ ಕೌಂಟರ್: ಪೊಲೀಸ್ ಹುತಾತ್ಮ

ಕಳೆದ ಎರಡೂವರೆ ವರ್ಷಗಳಲ್ಲಿ 2,800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ, ದೇಶದಲ್ಲಿ 2ನೇ ಸ್ಥಾನದಲ್ಲಿ ಕರ್ನಾಟಕ: ಸಚಿವ ಚಲುವರಾಯಸ್ವಾಮಿ

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

SCROLL FOR NEXT