ಸಂಗ್ರಹ ಚಿತ್ರ 
ರಾಜ್ಯ

ದಟ್ಟವಾದ ಮಂಜು-ಹೊಗೆಯಿಂದ ಹಾರದ ವಿಮಾನ: ಶಾಮನೂರು ಅಂತಿಮ ದರ್ಶನಕ್ಕೆ ಹೊರಟಿದ್ದ ರಾಜ್ಯದ 21 ಶಾಸಕರು ಲಾಕ್!

ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ ಬೆಳಗಾವಿಗೆ ಹೋಗುವ ವಿಮಾನ ಏರಿದ್ದರು.

ದೆಹಲಿ: ದೇಶದಾದ್ಯಂತ ಹವಾಮಾನದಲ್ಲಿ ಭಾರೀ ಬದಲಾವಣೆ ಆಗಿದೆ. ಡಿಸೆಂಬರ್ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮುಂಜಾನೆ ಹಿಮಪಾತವಾಗುತ್ತಿರುವ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ದೆಹಲಿಗೆ ತೆರಳಿದ್ದ ರಾಜ್ಯದ 20ಕ್ಕೂ ಹೆಚ್ಚು ಶಾಸಕ, ಸಚಿವರು ಇಂಡಿಗೋ ವಿಮಾನದಲ್ಲೇ ಸಿಲುಕಿದ್ದಾರೆ.

ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ ಬೆಳಗಾವಿಗೆ ಹೋಗುವ ವಿಮಾನ ಏರಿದ್ದರು. ಶಾಸಕರ ವಿಮಾನ ಬೆಳಗ್ಗೆ 5:30ಕ್ಕೆ ದೆಹಲಿಯಿಂದ ಹೊರಡಬೇಕಿತ್ತು. ವಿಮಾನದ ಒಳಗಡೆ ಕುಳಿತುಕೊಂಡ ಬಳಿಕ ದಟ್ಟವಾದ ಹೊಗೆಯಿಂದಾಗಿ ವಿಮಾನ ಟೇಕಾಫ್‌ ಆಗಿಲ್ಲ.

ಸುಮಾರು 4 ಗಂಟೆಯಿಂದ ಶಾಸಕರು ವಿಮಾನದಲ್ಲೇ ಕುಳಿತ್ತಿದ್ದು ಬೆಳಗ್ಗೆ 10 ಗಂಟೆಯಾದರೂ ವಿಮಾನ ಟೇಕಾಫ್‌ ಅಗಿಲ್ಲ. ವಿಮಾನ ಎಷ್ಟು ಗಂಟೆಗೆ ಟೇಕಾಫ್‌ ಆಗಲಿದೆ ಎಂಬ ಮಾಹಿತಿಯನ್ನು ಸಿಬ್ಬಂದಿ ನೀಡಿಲ್ಲ. ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನಗಳ ಟೇಕಾಫ್‌ ಮತ್ತು ಲ್ಯಾಂಡಿಂಗ್‌ಗೆ ಸಮಸ್ಯೆಯಾಗಿದೆ.

ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್‌ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ ಬಿ ಪಾಟೀಲ್, ಅಲ್ಲಮಪ್ರಭು, ರೆಹಮಾನ್ ಖಾನ್, ಕೆಜೆ ಜಾರ್ಜ್ ವಿಮಾನದಲ್ಲಿ ಸಿಲುಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದ ರೈತರಿಗೆ ತಕ್ಷಣ 10 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!

ಮಂಡ್ಯ: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಬರ್ತ್‌ಡೇ ಪಾರ್ಟಿಗೆ ಕರೆದು ರೇಪ್‌ಗೆ ಯತ್ನಿಸಿ, ಕೊಲೆ ಆರೋಪ!

ಸನಾತನ ಧರ್ಮ ಟೀಕಿಸಿದ್ದ ವ್ಯಕ್ತಿಯ ಬಂಧನವಾಗಿದೆ: ಉದಯನಿಧಿ ಸ್ಟಾಲಿನ್​​​ಗೆ ಕುಟುಕಿದ BJP

ಸರ್ಕಾರಿ ಸ್ವಾಮ್ಯದ LIC ಸಂಸ್ಥೆಯಲ್ಲಿ ಶೇ.6.5 ರಷ್ಟು ಪಾಲು ಮಾರಾಟ; $3.3 ಬಿಲಿಯನ್ ಸಂಗ್ರಹ ಗುರಿ; ಪ್ರತಿ ಷೇರಿನ ಬೆಲೆ ಎಷ್ಟು ಗೊತ್ತೆ?