ಮುರುಘಾ ಮಠದ ಶಿವಮೂರ್ತಿ ಶರಣರು 
ರಾಜ್ಯ

ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

ನವೆಂಬರ್ 26 ರಂದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಹಡಪದ್ ನೀಡಿದ ತೀರ್ಪಿನ ವಿರುದ್ಧ ಸಂತ್ರಸ್ತೆ ತನ್ನ ವಕೀಲ ಶ್ರೀನಿವಾಸ್ ಡಿಸಿ ಮೂಲಕ ಕ್ರಿಮಿನಲ್ ಮೇಲ್ಮನವಿ(CRL A 2498/2025) ಸಲ್ಲಿಸಿದ್ದಾರೆ.

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಖುಲಾಸೆಗೊಳಿಸಿದ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ನವೆಂಬರ್ 26 ರಂದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಹಡಪದ್ ನೀಡಿದ ತೀರ್ಪಿನ ವಿರುದ್ಧ ಸಂತ್ರಸ್ತೆ ತನ್ನ ವಕೀಲ ಶ್ರೀನಿವಾಸ್ ಡಿಸಿ ಮೂಲಕ ಕ್ರಿಮಿನಲ್ ಮೇಲ್ಮನವಿ(CRL A 2498/2025) ಸಲ್ಲಿಸಿದ್ದಾರೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್, ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ನೀಡಿದೆ. ಪ್ರಕರಣದ ಎರಡನೇ ಆರೋಪಿ ರಶ್ಮಿ ಹಾಗೂ ನಾಲ್ಕನೇ ಆರೋಪಿ ಪರಮಶಿವಯ್ಯ ಅವರನ್ನು ಕೂಡ ನಿರ್ದೋಷಿ ಎಂದು ಕೋರ್ಟ್​​ ತೀರ್ಪು ನೀಡಿದ್ದು, ಈ ತೀರ್ಪು ಪ್ರಶ್ನಿಸಿ ಸಂತ್ರಸ್ತೆ ಮೇಲ್ಮನವಿ ಸಲ್ಲಿಸಿದ್ದಾರೆ.

ವೈದ್ಯಕೀಯ ವರದಿಯಲ್ಲಿ ಲೈಂಗಿಕ ದೌರ್ಜನ್ಯದ ಯಾವುದೇ ಪುರಾವೆಗಳಿಲ್ಲ ಮತ್ತು ವೈದ್ಯರು ಮತ್ತು ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತರು ನೀಡಿದ ಸಾಕ್ಷ್ಯಗಳು ವಿರೋಧಾತ್ಮಕವಾಗಿವೆ ಎಂದು ಕೆಳ ನ್ಯಾಯಾಲಯವು ತೀರ್ಪು ನೀಡಿತ್ತು. ಕಳೆದ 15 ವರ್ಷಗಳಿಂದ ಶರಣರು ಮತ್ತು ಬಸವರಾಜನ್ ನಡುವೆ ಆಸ್ತಿ ವಿವಾದವಿತ್ತು ಎಂದು ನ್ಯಾಯಾಲಯವು ಕಂಡುಕೊಂಡಿದ್ದು, ಇದು ಪ್ರಕರಣವನ್ನು ದುರ್ಬಲಗೊಳಿಸಿದೆ.

ಶ್ರೀಗಳ ವಿರುದ್ಧ ದಾಖಲಾಗಿರುವ ಪ್ರಕರಣವು ಪಿತೂರಿ ಎಂದು ನ್ಯಾಯಾಲಯ ಹೇಳಿದೆ. "ಸಂತ್ರಸ್ತರು ನೀಡಿದ ಹೇಳಿಕೆಗಳು ಒಂದಕ್ಕೊಂದು ಹೊಂದಿಕೆಯಾಗುತ್ತಿಲ್ಲ. ಮಾಜಿ ಶಾಸಕ ಮತ್ತು ಮಠದ ವ್ಯವಸ್ಥಾಪಕ ಎಸ್.ಕೆ. ಬಸವರಾಜನ್ ಅವರು ಘಟನೆಗೆ ಸಂಬಂಧಿಸಿದಂತೆ ಎಸ್ಪಿಗೆ ಸಾಕ್ಷ್ಯ ಮತ್ತು ಫೋಟೋಗಳನ್ನು ನೀಡಿರುವುದಾಗಿ ಹೇಳಿದ್ದರೂ, ವಿಚಾರಣೆಯ ಸಮಯದಲ್ಲಿ ಅದನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ" ಎಂದು ತೀರ್ಪಿನಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ