ಸಂಗ್ರಹ ಚಿತ್ರ 
ರಾಜ್ಯ

ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ 'ಭಾರತ ರತ್ನ': ಡಿಸೆಂಬರ್ 17ರಂದು ದೆಹಲಿಯಲ್ಲಿ ಒಕ್ಕಲಿಗ ನಾಯಕರ ಸಭೆ

ಕೇಂದ್ರವು ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ, ಒಕ್ಕಲಿಗ ನಾಯಕತ್ವ ಮತ್ತು ಇತರೆ ಗಣ್ಯರು ಡಿಸೆಂಬರ್ 17 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಕರ್ನಾಟಕ ಸಂಘ ಮತ್ತು ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ದಿ ಟ್ರಸ್ಟ್ ಆಯೋಜಿಸಿರುವ ಪದ್ಮವಿಭೂಷಣ ಕುವೆಂಪು ಕುರಿತ ಕಾರ್ಯಾಗಾರದಲ್ಲಿ ಆದಿಚುನಾನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಗವಹಿಸಲಿದ್ದಾರೆ.

ಕೇಂದ್ರವು ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ, ಮತ್ತು ವಿ.ಸೋಮಣ್ಣ, ಬಿಜೆಪಿ ಸಂಸದರಾದ ಡಾ.ಸಿ.ಎನ್.ಮಂಜುನಾಥ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತೇಜಸ್ವಿ ಸೂರ್ಯ, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಟಿ.ಬಿ.ಜಯಚಂದ್ರ, ಚಂದ್ರಶೇಖರ ಕಂಬಾರ, ನಾಡೋಜ ಹಂಪ ನಾಗರಾಜಯ್ಯ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಮಾಧವ ಕೌಶಿಕ್ ಸೇರಿದಂತೆ ಮತ್ತಿತರರು ಭಾಗವಹಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!

ಟ್ರಂಪ್ ಸುಂಕ ಕಾನೂನುಬಾಹಿರ: ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ..

ನನಗೂ ಚಿಂತೆಯಾಗಿದೆ: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೂ ಮುನ್ನ ಅಭಿಷೇಕ್ ಶರ್ಮಾ ಕುರಿತು ಸೂರ್ಯ ಸ್ಫೋಟಕ ಹೇಳಿಕೆ

40ನೇ ವಯಸ್ಸಿನಲ್ಲಿ ಶಿಖರ್ ಧವನ್ 2ನೇ ಮದುವೆ: ಗೆಳತಿ ಸೋಫಿ ಶೈನ್ ಜೊತೆ 'ಗಬ್ಬರ್' ಸಪ್ತಪದಿ, ಫೋಟೋ ವೈರಲ್!

ಅಯೋಧ್ಯೆ ರಾಮ ಮಂದಿರಕ್ಕೆ 4 ಕಿ.ಮೀ ಉದ್ದದ ಭದ್ರತಾ ಗೋಡೆ ನಿರ್ಮಾಣ; ಇದರ ವಿಶೇಷತೆ ಏನು?

SCROLL FOR NEXT