ಡಿ.ಕೆ ಶಿವಕುಮಾರ್ 
ರಾಜ್ಯ

ಸಮಾಜದ ಹಿತಕ್ಕಾಗಿ ದ್ವೇಷ ಭಾಷಣ ನಿಷೇಧ: ಡಿ.ಕೆ ಶಿವಕುಮಾರ್

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

ಬೆಳಗಾವಿ: ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ ಮಂಗಳವಾರ ಬೆಳಿಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ ಜಿಎಸ್ ಟಿ ಪರಿಷ್ಕರಣೆ ಮೂಲಕ ರಾಜ್ಯದ ಆದಾಯ ಕಡಿಮೆ ಮಾಡಿದೆ. ವಾರ್ಷಿಕ 10-15 ಸಾವಿರ ಕೋಟಿ ಕೊರತೆಯಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ.

ಒಂದೆರಡು ತಿಂಗಳು ಹೆಚ್ಚು ಕಮ್ಮಿಯಾಗಲಿದೆ. ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ. ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗೆ ಘೋಷಿಸಿದ ಅನುದಾನ ಇಲ್ಲಿಯವರೆಗೂ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ?" ಎಂದು ಪ್ರಶ್ನಿಸಿದರು.

ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ಕಾನೂನು ತರಲಾಗುತ್ತಿದೆ. ಇದರಿಂದ ರಾಜ್ಯ ಹಾಗೂ ಸಮಾಜಕ್ಕೆ ಒಳ್ಳೆಯದಾಗಲಿದೆ" ಎಂದರು. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು. ಮತಕಳ್ಳತನದಿಂದ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ನಮ್ಮ ಯಶಸ್ವಿ" ಎಂದರು.

ನಾವು ಅನೇಕರಿಗೆ ಅಧಿಕಾರವನ್ನೇ ಕೊಟ್ಟಿಲ್ಲ. ಆದರೂ ಸಾವಿರಾರು ರೂಪಾಯಿ ಹಣವನ್ನು ಖರ್ಚು ಮಾಡಿಕೊಂಡು ದೆಹಲಿಗೆ ಬಂದು ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದಾರೆ" ಎಂದರು. ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಬೇಕು ಎಂದು ಪ್ರಿಯಾಂಕ ಗಾಂಧಿ ಅವರು ಸಂದೇಶ ನೀಡಿದ್ದಾರೆ. ಪ್ರತಿಭಟನೆ ಯಶಸ್ವಿಯಾಯಿತು. ಕರ್ನಾಟಕದ ಮೂಲೆ,‌ ಮೂಲೆಯಿಂದ ಬಂದ ಕಾರ್ಯಕರ್ತರು, ಮುಖಂಡರಿಗೆ ಪಕ್ಷದ ಪರವಾಗಿ ಧನ್ಯವಾದಗಳು" ಎಂದರು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದೀರಾ ಎಂದು ಕೇಳಿದಾಗ, "ಭೇಟಿಯಾಗಿದ್ದನ್ನು, ಕುಶಲೋಪರಿ ವಿಚಾರಿಸುವುದನ್ನು ಫೋಟೋಗಳಲ್ಲಿ ನೀವುಗಳೂ ನೋಡಿದ್ದೀರಲ್ಲ"ಎಂದರು. "ಕರ್ನಾಟಕದ ಅಭಿವೃದ್ಧಿ ಬಗ್ಗೆ ಏನು ಚರ್ಚೆಯಾಯಿತು ಎಂದು ಮಾಧ್ಯಮದವರು ಹೇಳುತ್ತಾರೆಯೇ?" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಾಯುಕ್ತ ದಾಳಿ: ನಾಲ್ವರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದು 18.2 ಕೋಟಿ ರೂ. ಅಕ್ರಮ ಆಸ್ತಿ!

ಕೇಂದ್ರದ ಆದೇಶವನ್ನೇ ಧಿಕ್ಕರಿಸಿದ ಕೇರಳ: IFFK ಯಲ್ಲಿ ನಿರ್ಬಂಧಿತ ಎಲ್ಲಾ ಚಲನಚಿತ್ರಗಳನ್ನು ಪ್ರದರ್ಶಿಸಲು ಆದೇಶ!

ಕಾಂಗ್ರೆಸ್ ಸಂಸದರಿಗೆ 'ವಿಪ್' ಜಾರಿ: ಮುಂದಿನ ಮೂರು ದಿನ ಲೋಕಸಭೆಯಲ್ಲಿ ಕಡ್ಡಾಯ ಹಾಜರಿಗೆ ಸೂಚನೆ

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು

Hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪ'; ಬಿಹಾರ ಮುಸ್ಲಿಂ ಸಚಿವ ಸ್ಪಷ್ಟನೆ

SCROLL FOR NEXT