ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್​ ಅವರ ಮನೆ 
ರಾಜ್ಯ

ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ; ಹಣ ಕಮೋಡ್‌ಗೆ ಸುರಿದ ಅಧಿಕಾರಿ!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಶಿವಮೊಗ್ಗ, ಧಾರವಾಡ ಹಾಗೂ ವಿಜಯನಗರ ಸೇರಿದಂತೆ ರಾಜ್ಯದ ಹಲವು ಕಡೆ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ನಗರದ ಬಸವನಗುಡಿ ಪ್ರದೇಶದಲ್ಲಿರುವ ರೂಪ್ಲಾ ನಾಯ್ಕ್ ಅವರ ನಿವಾಸ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸುದೀರ್ಘ ಪರಿಶೀಲನೆ ನಡೆಸುತ್ತಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಅಧಿಕಾರಿಗಳು ದಾಖಲೆಗಳು, ಬ್ಯಾಂಕ್ ಖಾತೆಗಳು, ಆಸ್ತಿ ದಾಖಲೆಗಳು ಸೇರಿದಂತೆ ವಿವಿಧ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇದರ ಜೊತೆಗೆ, ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸದ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಲ್ಲಿ ಕೂಡ ಆಸ್ತಿ ಸಂಬಂಧಿತ ದಾಖಲೆಗಳ ಶೋಧ ಕಾರ್ಯ ಮುಂದುವರಿದಿದೆ.

ಧಾರವಾಡದಲ್ಲಿ ಹಣ ಕಮೋಡ್‌ಗೆ ಸುರಿದ ಅಧಿಕಾರಿ

ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್​ ಅವರ ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜಶೇಖರ್ ಅವರಿ​​ಗೆ ಸೇರಿದ ಒಟ್ಟು ಮೂರು ಕಡೆ ದಾಳಿ​​ ನಡೆದಿದೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್​ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಸಿಬ್ಬಂದಿ ಕಂಡು ಬೆದರಿದ ರಾಜಶೇಖರ್ ಅವರು​​ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್‌ಗೆ ಸುರಿದು ಫ್ಲಶ್​​ ಮಾಡಿದ್ದಾರೆ. ಸುಮಾರು ಅರ್ಧಗಂಟೆ ಕಾಲ ಲೊಕಾಯುಕ್ತ ಪೊಲೀಸರನ್ನು ಮನೆ ಹೊರಗೆ ಕಾಯಿಸಿ ಬಳಿಕ ಬಾಗಿಲು ತೆಗೆದಿದ್ದಾರೆ ಎನ್ನಲಾಗಿದೆ.

ವಿಜಯನಗರದಲ್ಲೂ ರೇಡ್

ವಿಜಯನಗರ ಡಿಎಚ್‌ಒ ಡಾ. ಎಲ್.ಆರ್. ಶಂಕರ್ ನಾಯ್ಕ್ ಅವರ ಮನೆ, ಕಚೇರಿ ಹಾಗೂ ಪತ್ನಿ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಡಿಎಚ್‌ಒ ಡಾ. ಎಲ್.ಆರ್. ಶಂಕರ್ ನಾಯ್ಕ್ ಅವರು ತಮ್ಮ ಮನೆಯ ಸಮೀಪ ಖಾಸಗಿ ಆಸ್ಪತ್ರೆಯನ್ನು ಸಹ ನಡೆಸುತ್ತಿದ್ದು, ಲೋಕಾಯುಕ್ತ ಅಧಿಕಾರಿಗಳು ಅಲ್ಲಿಗೆ ಸಹ ತೆರಳಿ ಪರಿಶೀಲನೆ ನಡೆಸಿದರು. ಡಿಎಚ್ಒ ಅವರ ಪತ್ನಿ ಈ ಆಸ್ಪತ್ರೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್