ದಿನೇಶ್ ಗುಂಡೂರಾವ್ 
ರಾಜ್ಯ

ರಾಜ್ಯದಲ್ಲಿ 'ಹೆಣ್ಣು ಭ್ರೂಣ ಹತ್ಯೆ' ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳ ನೇಮಕ: ದಿನೇಶ್ ಗುಂಡೂರಾವ್

ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಣ್ಣು ಭ್ರೂಣ ಹತ್ಯೆ ಖಂಡಿತ ನಿಂತಿಲ್ಲ. ನೀವು ಲಿಂಗ ಅನುಪಾತವನ್ನು ನೋಡಿದರೆ, ಬಹಳಷ್ಟು ವ್ಯತ್ಯಾಸವಿದೆ. ಇದು ನಡೆಯುತ್ತಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಬೆಳಗಾವಿ: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಎಂದು ಮಂಗಳವಾರ ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಅನಿಷ್ಟ ಎಂದು ಕರೆದ ಸಚಿವರು, ಇದನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಸರ್ಕಾರ ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸುತ್ತಿದೆ. ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಕಾನೂನು ಬಲಪಡಿಸುವಿಕೆಯನ್ನು ಸರ್ಕಾರ ಪರಿಗಣಿಸಲಿದೆ ಎಂದು ಅವರು ಭರವಸೆ ನೀಡಿದರು.

ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಣ್ಣು ಭ್ರೂಣ ಹತ್ಯೆ ಖಂಡಿತ ನಿಂತಿಲ್ಲ. ನೀವು ಲಿಂಗ ಅನುಪಾತವನ್ನು ನೋಡಿದರೆ, ಬಹಳಷ್ಟು ವ್ಯತ್ಯಾಸವಿದೆ. ಇದು ನಡೆಯುತ್ತಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ರಾವ್ ಹೇಳಿದರು.

ಭ್ರೂಣ ಹತ್ಯೆಗಳು ಒತ್ತಡದಲ್ಲಿ ನಡೆಯುತ್ತಿಲ್ಲ. ಹೆಣ್ಣು ಮಗು ಬೇಡ ಎಂಬ ಕಾರಣಕ್ಕೆ ಸ್ವಯಂಪ್ರೇರಣೆಯಿಂದ ನಡೆಯುತ್ತಿದೆ. ಕೆಲವು ಆಸ್ಪತ್ರೆಗಳಲ್ಲಿ ಲಿಂಗ ಪತ್ತೆ ಆಧಾರದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ. ಇದು ಕಾನೂನುಬಾಹಿರವಾಗಿದ್ದು, ತಂತ್ರಜ್ಞಾನದ ಪ್ರಗತಿಯೊಂದಿಗೆ ಪೋರ್ಟಬಲ್ ಅಲ್ಟ್ರಾಸೌಂಡ್ ಯಂತ್ರಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನು ಎಲ್ಲಿ ಬೇಕಾದರೂ ಸುಲಭವಾಗಿ ಸಾಗಿಸಬಹುದು ಪರಿಶೀಲಿಸಬಹುದು. ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ. ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದರು.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತ್ತು ಕೆಲವು ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯ ಗಂಡು ಮಕ್ಕಳ ಜನನಗಳು ದಾಖಲಾಗುತ್ತಿವೆ ಎಂಬುದು ಗುಪ್ತಚರ ಮಾಹಿತಿಯ ಮೂಲಕ ತಿಳಿದುಬರುತ್ತಿದೆ. ಯಾವ ತಾಲ್ಲೂಕಿನಲ್ಲಿ ಪುರುಷ-ಮಹಿಳೆಯರ ಅನುಪಾತ ಹದಗೆಡುತ್ತಿದೆ, ಯಾವ ಆಸ್ಪತ್ರೆಯಲ್ಲಿ ಏನಾಗುತ್ತಿದೆ ಎಂಬ ಮಾಹಿತಿ ಕಲೆಹಾಕಿ ಸೂಕ್ತ ಪರಿಶೀಲನೆ ನಡೆಸಿ ಇಂತಹ ಜಾಲಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದವರನ್ನು ಗುರುತಿಸಲು ಕಳೆದ ಎರಡು ವರ್ಷಗಳಲ್ಲಿ ಏಳು ಕಡೆ ಡೆಕಾಯ್ ಆಪರೇಷನ್ ಮಾಡಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಆದ್ಯತೆಯ ಮೇಲೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಯಾವುದೇ ಕಟ್ಟುನಿಟ್ಟಿನ ಕಾನೂನನ್ನು ತರಲಾಗುತ್ತಿದೆಯೇ ಎಂಬ ರವಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾವ್, ಸರ್ಕಾರವು ಕಾನೂನನ್ನು ಬಲಪಡಿಸುವ ಮತ್ತು ಇದನ್ನು ನಿಯಂತ್ರಿಸಲು ಕಟ್ಟುನಿಟ್ಟಾಗಿ ಮಾಡುವ ಬಗ್ಗೆ ಪರಿಗಣಿಸುತ್ತದೆ ಎಂದರು.

"ಕಳೆದ ಎರಡು ವರ್ಷಗಳಲ್ಲಿ ಅಸ್ತಿತ್ವದಲ್ಲಿರುವ ಕಾನೂನುಗಳಿಗೆ ಕೆಲವು ತಿದ್ದುಪಡಿಗಳನ್ನು ಮಾಡಲಾಗಿದೆ. ಸುಧಾರಿತ ತಂತ್ರಜ್ಞಾನ ಮತ್ತು ಅಂತರ್ಜಾಲವನ್ನು ಇಂತಹ ವಿಚಾರಗಳನ್ನು ಕೈಗೊಳ್ಳಲು ಬಳಸಲಾಗುತ್ತಿದೆ, ಗರ್ಭಪಾತಕ್ಕೆ ಮೌಖಿಕ ಔಷಧಿಗಳು ಕೌಂಟರ್‌ನಲ್ಲಿ ಲಭ್ಯವಿದೆ. ಅವುಗಳ ನಿಯಂತ್ರಣಕ್ಕೆ ಕಾನೂನು ತರಲು ನಾವು ಪರಿಶೀಲಿಸಬೇಕಾಗಿದೆ. ಅಂತಹ ಔಷಧಿಗಳ ಮಾರಾಟವನ್ನು ದಾಖಲಿಸಬೇಕು ಎಂದು ಆಹಾರ ಮತ್ತು ಔಷಧಿ ಆಡಳಿತವು ಫಾರ್ಮಾಸಿಸ್ಟ್‌ಗಳಿಗೆ ಸೂಚನೆಗಳನ್ನು ನೀಡಿದೆ. ಗರ್ಭಧಾರಣೆಯ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳ (ಪಿಸಿ ಮತ್ತು ಪಿಎನ್‌ಡಿಟಿ) ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ಹೆಣ್ಣು ಭ್ರೂಣಗಳನ್ನು ಗುರುತಿಸುವುದು ಮತ್ತು ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT