ಬಾಸ್ಟಿಯನ್ ರೆಸ್ಟೋರೆಂಟ್ 
ರಾಜ್ಯ

ಬೆಂಗಳೂರು: ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ವಿರುದ್ಧ ಪ್ರಕರಣ ದಾಖಲು

ಬಾಸ್ಟಿಯನ್ ಪಬ್ ಅನ್ನು ಉದ್ಯಮಿ ರಂಜಿತ್ ಬಿಂದ್ರಾ ಒಡೆತನದ ಬಾಸ್ಟಿಯನ್ ಹಾಸ್ಪಿಟಾಲಿಟಿ ಸ್ಥಾಪಿಸಿತು. ಶಿಲ್ಪಾ ಶೆಟ್ಟಿ 2019 ರಲ್ಲಿ ಪಬ್‌ನಲ್ಲಿ ಹೂಡಿಕೆ ಮಾಡಿ ಶೇ 50 ರಷ್ಟು ಪಾಲನ್ನು ಪಡೆದಿದ್ದಾರೆ.

ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಅವಧಿ ಮೀರಿ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಇಲ್ಲಿನ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಬಾಸ್ಟಿಯನ್ ಎಂಬ ರೆಸ್ಟೋರೆಂಟ್ ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಡಿಸೆಂಬರ್ 11 ರಂದು ನಿಯಮಗಳನ್ನು ಉಲ್ಲಂಘಿಸಿ ತಡರಾತ್ರಿ ಪಾರ್ಟಿಗಳನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

'ಪೊಲೀಸ್ ಅಧಿಕಾರಿಯೊಬ್ಬರ ದೂರಿನ ಆಧಾರದ ಮೇಲೆ, ಡಿಸೆಂಬರ್ 14 ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ಮತ್ತು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಫ್‌ಐಆರ್ ಪ್ರಕಾರ, ಪೊಲೀಸ್ ಅಧಿಕಾರಿ ಡಿಸೆಂಬರ್ 11 ರಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಗಸ್ತು ಕರ್ತವ್ಯದಲ್ಲಿದ್ದರು ಮತ್ತು ಮಾಹಿತಿದಾರರಿಂದ ಬಂದ ಸುಳಿವು ಮೇರೆಗೆ ಪಬ್ ಅನ್ನು ಪರಿಶೀಲಿಸಿದರು.

'ತಡರಾತ್ರಿ 1.30ರ ಸುಮಾರಿಗೆ, ದೂರುದಾರರು ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ, ವ್ಯವಸ್ಥಾಪಕರು ಸರ್ಕಾರ ನಿಗದಿಪಡಿಸಿದ ಸಮಯವನ್ನು ಮೀರಿ ಅನಧಿಕೃತವಾಗಿ ಅದನ್ನು ನಡೆಸುತ್ತಿದ್ದಾರೆ ಎಂದು ಕಂಡುಬಂದಿದೆ' ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಆದಾಯ ತೆರಿಗೆ ಇಲಾಖೆ ದಾಳಿ

ಮತ್ತೊಂದೆಡೆ, ಬೆಂಗಳೂರಿನ ಚರ್ಚ್ ಸ್ಟ್ರೀಟ್‌ ಸಮೀಪವಿರುವ ಜನಪ್ರಿಯ ಬಾಸ್ಟಿಯನ್ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯ ನಿಖರ ಕಾರಣ ತಿಳಿದುಬಂದಿಲ್ಲ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದು, ಈ ದಾಳಿಯು ಆ ಹಿಂದಿನ ಪ್ರಕರಣಗಳ ಮುಂದುವರಿದ ಭಾಗವೇ ಅಥವಾ ಪಬ್‌ಗೆ ಸಂಬಂಧಿಸಿದ ಇತರ ವಿವಾದಗಳಿಗೆ ಸಂಬಂಧಿಸಿದ್ದೇ ಎಂಬ ಪ್ರಶ್ನೆಗಳು ಮೂಡಿವೆ.

ಕೆಲವು ದಿನಗಳ ಹಿಂದಷ್ಟೇ ಬಾಸ್ಟಿಯನ್ ಪಬ್‌ನಲ್ಲಿ ಗಲಾಟೆ ನಡೆದಿತ್ತು ಎಂದು ಹೇಳಲಾಗಿತ್ತು. ಉದ್ಯಮಿ ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆದಿದ್ದು, ಈ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಸಂಬಂಧ ಪೊಲೀಸರು ಪಬ್‌ಗೆ ತೆರಳಿ, ಸಿಬ್ಬಂದಿ ಮತ್ತು ಮ್ಯಾನೇಜರ್ ಅವರನ್ನು ವಿಚಾರಣೆಗೊಳಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video