ಡಿ.ಕೆ.ಶಿವಕುಮಾರ್ 
ರಾಜ್ಯ

ನೀರಿನ ಲಭ್ಯತೆ ಆಧಾರಿಸಿ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ 2ನೇ ಹಂತ ಜಾರಿ

ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ‌ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕೆ ನೀರಿನ ಲಭ್ಯತೆ ನೋಡಬೇಕಿದೆ. ನೀರಿಲ್ಲದೇ ಹೇಗೆ ಕೆಲಸ ಮಾಡುವುದು ಹೇಗೆ?

ಬೆಳಗಾವಿ: ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ 2ನೇ ಹಂತವನ್ನು ಜಾರಿಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಕಟಾಕದೊಂಡ ವಿಠ್ಠಲದೊಂಡಿಬಾ ಅವರ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು ಉತ್ತರಿಸಿದರು.

ಹೊರ್ತಿ ರೇವಣಸಿದ್ದೇಶ್ವರ ಯೋಜನೆಯ ಎರಡನೇ ಹಂತವನ್ನು ಯಾವಾಗ ಪ್ರಾರಂಭ ಮಾಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ‌ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕೆ ನೀರಿನ ಲಭ್ಯತೆ ನೋಡಬೇಕಿದೆ. ನೀರಿಲ್ಲದೇ ಹೇಗೆ ಕೆಲಸ ಮಾಡುವುದು ಹೇಗೆ? ಆಲಮಟ್ಟಿಯ 2.5 ಟಿಎಂಸಿ ನೀರನ್ನು ಬಳಸಿಕೊಂಡು 10 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸುವ ಯೋಜನೆ ಇದಾಗಿದೆ ಎಂದು ಹೇಳಿದರು.

ಆಲಮಟ್ಟಿ 3ನೇ ಹಂತದ ವಿಚಾರವಾಗಿ ಇನ್ನೂ ಕೇಂದ್ರದಿಂದ ಗೆಜೆಟ್ ನೋಟಿಫಿಕೇಷನ್ ಆಗಿಲ್ಲ. ಅದಕ್ಕಾಗಿ ನಾವು ಕಾರ್ಯಸಾಧ್ಯತೆಗಳನ್ನು ನೋಡುತ್ತಿದ್ದೇವೆ. ಎರಡನೇ ಹಂತದ ಕೆಲಸ ಪೂರ್ಣಗೊಳಿಸಲು ನಾವೂ ಉತ್ಸುಕರಾಗಿದ್ದೇವೆ. ಆದರೆ, ನೀರಿನ ಲಭ್ಯತೆ ಪ್ರಮುಖ ಅಂಶವಾಗಿದೆ ಎಂದು ತಿಳಿಸಿದರು.

ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ‌ ಯೋಜನೆಯ ಮೊದಲನೇ ಹಂತದ ಕಾಮಗಾರಿಯನ್ನು 2,638 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಸಲಾಗುತ್ತಿದೆ. ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ 3.24 ಟಿಎಂಸಿ ನೀರನ್ನು ಬಳಸಿಕೊಳ್ಳಲಾಗುವುದು. ಇದರಿಂದ 6 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಅನುಕೂಲವಾಗಲಿದೆ.

ಆಲಮಟ್ಟಿ ‌ಮೂರನೇ ಹಂತದ ಯೋಜನೆ ಅನುಷ್ಠಾನಕ್ಕೆ ಭೂಸ್ವಾಧೀನ ವಿಚಾರವಾಗಿ ದೊಡ್ಡ ತೀರ್ಮಾನ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ನೀರಿನ ಲಭ್ಯತೆ ನೋಡಿಕೊಂಡು ಕೆಲಸವನ್ನು ತೆಗೆದುಕೊಳ್ಳುತ್ತೇವೆಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ; ಸಂಸತ್ ನಲ್ಲಿ ಕೋಲಾಹಲ, ಕಲಾಪ ಮುಂದೂಡಿಕೆ

ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡ್ತಾರೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸಂಘದಿಂದ ದೂರು

ಜಸ್ಟ್ ಮಿಸ್, ಮಗು ಬಚಾವ್: ಚಾಲಕನ ಸಮಯ ಪ್ರಜ್ಞೆಗೆ ಹ್ಯಾಟ್ಸಾಫ್! Video

ಔಟಾಗಿ ಹೋಗುತ್ತಿದ್ದ Pak ಆಟಗಾರನ ಕಡೆ ಕೋಪದಿಂದ ನುಗ್ಗಿದ ಸೂರ್ಯವಂಶಿ, ಕೂಡಲೇ ಮಧ್ಯಪ್ರವೇಶಿಸಿದ ವಿಹಾನ್, Video!

ಆರಂಭಿಕ ಕುಸಿತದ ನಂತರ ಚಿನ್ನದ ಫ್ಯೂಚರ್ಸ್ 10 ಗ್ರಾಂಗೆ 1.48 ಲಕ್ಷ ರೂ.ಗೆ ಏರಿಕೆ

SCROLL FOR NEXT