ಬೆಂಗಳೂರು: ರಾಜ್ಯದಾದ್ಯಂತ ಕಳೆದ 36 ಗಂಟೆಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು ಮತ್ತು ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹ) ಅಲೋಕ್ ಕುಮಾರ್ ಬುಧವಾರ ಹೇಳಿದರು.
ಬೆಂಗಳೂರಿನ ಜೈಲಿನಿಂದ ಆರು ಮೊಬೈಲ್ ಫೋನ್‌ಗಳು ಮತ್ತು ನಾಲ್ಕು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮೈಸೂರು ಜೈಲಿನಿಂದ ಒಂಬತ್ತು ಮೊಬೈಲ್ ಫೋನ್‌ಗಳು ಮತ್ತು 11 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
'ಬೆಳಗಾವಿ ಜೈಲಿನಲ್ಲಿ ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಹೊರಗಿನಿಂದ ಎಸೆದ 366 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಜೈಲಿನಿಂದ ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ವಿಜಯಪುರ ಜೈಲಿನಿಂದ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಜೈಲುಗಳೊಳಗಿನ ಅಕ್ರಮ ಚಟುವಟಿಕೆಗಳನ್ನು ತಡೆಯಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ತಿಳಿಸಿದರು.