ಬೆಂಗಳೂರು ವಿಮಾನ ನಿಲ್ದಾಣ  online desk
ರಾಜ್ಯ

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದ್ದರೂ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಯಾವುದೇ ಔಪಚಾರಿಕ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ...

ನವದೆಹಲಿ/ಬೆಂಗಳೂರು: ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದ್ದರೂ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಯಾವುದೇ ಔಪಚಾರಿಕ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ ಎಂದು ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಲೋಕಸಭೆಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಅಥವಾ ವಾಣಿಜ್ಯ ಪ್ರಯಾಣಿಕರ ಕಾರ್ಯಾಚರಣೆಗಾಗಿ HAL ವಿಮಾನ ನಿಲ್ದಾಣವನ್ನು ಪುನಃ ತೆರೆಯುವ ಪ್ರಸ್ತಾವನೆಗಳ ಕುರಿತು ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವರು ಈ ಉತ್ತರ ನೀಡಿದರು.

ನಾಗರಿಕ ವಿಮಾನಯಾನ ಸಚಿವಾಲಯದ ಪರವಾಗಿ ಉತ್ತರಿಸಿದ ಸಚಿವರು, ಕರ್ನಾಟಕ ಸರ್ಕಾರದ ಕೋರಿಕೆಯ ಮೇರೆಗೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಮೂರು ಸ್ಥಳಗಳಲ್ಲಿ ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿತ್ತು. ಪೂರ್ವ-ಕಾರ್ಯಸಾಧ್ಯತಾ ವರದಿಯನ್ನು ಈಗಾಗಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದಾಗ್ಯೂ, ಕರ್ನಾಟಕ ಸರ್ಕಾರ ಅಥವಾ ಯಾವುದೇ ಖಾಸಗಿ ವಿಮಾನ ನಿಲ್ದಾಣ ಬಂಡವಾಳಗಾರರು ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ (GFA) ನೀತಿಯಡಿಯಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಸ್ತಾವನೆಯನ್ನು ಸಲ್ಲಿಸಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ಭಾರತ ಸರ್ಕಾರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ನಡುವಿನ ಒಪ್ಪಂದದ ಪ್ರಕಾರ, ದೇಶೀಯ ವಿಮಾನ ನಿಲ್ದಾಣಗಳಾಗಿ ಗೊತ್ತುಪಡಿಸಲಾದ ಮೈಸೂರು ಮತ್ತು ಹಾಸನ ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 150 ಕಿಮೀ ವ್ಯಾಪ್ತಿಯೊಳಗೆ ಯಾವುದೇ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವಂತಿಲ್ಲ ಎಂದು ಸಚಿವರು ಹೇಳಿದರು.

ಒಪ್ಪಂದದ ಪ್ರಕಾರ, 25 ವರ್ಷಗಳ ಷರತ್ತು ಅವಧಿ ಮುಗಿಯುವ ಮೊದಲೇ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಅಥವಾ HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯುವ ಯಾವುದೇ ಕ್ರಮಕ್ಕೆ BIAL ನಿಂದ ಪೂರ್ವಾನುಮತಿ ಅಗತ್ಯವಿರುತ್ತದೆ ಎಂದು ಸಚಿವಾಲಯ ಹೇಳಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹೆಚ್ಚುತ್ತಿರುವ ಪ್ರಯಾಣದ ಒತ್ತಡದಿಂದಾಗಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾಪ ಹೇಳಿಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!