ಮಲ್ಲಿಕಾರ್ಜುನ ಖರ್ಗೆ 
ರಾಜ್ಯ

ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ಕೊಡಿ: ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಒತ್ತಾಯ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾರಣರಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕಾಂಗ್ರೆಸ್ ಸದಸ್ಯ ಮನವಿ ಮಾಡಿದ್ದಾರೆ.

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾರಣರಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಭಾರತ ರತ್ನ (Bharat Ratna) ಪ್ರಶಸ್ತಿ ನೀಡಬೇಕೆಂದು ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ತಿಪ್ಪಣ್ಣಪ್ಪ, ಕಲ್ಯಾಣ ಕರ್ನಾಟಕದ ವಿಶೇಷ ಅಭಿವೃದ್ಧಿಗಾಗಿ ಭಾರತದ ಸಂವಿಧಾನಕ್ಕೆ ಸೇರಿಸಲಾದ ಅನುಚ್ಛೇದ 371(ಜೆ) ಅವಿರೋಧಾಗಿ ಪಾಸ್‌ ಆಗಿದೆ. ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದಾಗ ರಾಜ್ಯಕ್ಕೆ, ದೇಶಕ್ಕೆ ಅವರ ಸೇವೆ ಅಪಾರ. ಹೀಗಾಗಿ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದರು. ಮಲ್ಲಿಕಾರ್ಜುನ ಖರ್ಗೆ ಕಲಬುರಗಿಗೆ ಇಎಸ್‌ಐ ಆಸ್ಪತ್ರೆ ತಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ರೈಲು ಇಲ್ಲದ ಭಾಗಗಳಿಗೆ ರೈಲು ತಂದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಸ್ತುತ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ಪರಿಗಣಿಸಿ ಖರ್ಗೆ ಅವರನ್ನು ಗೌರವಿಸಬೇಕೆಂದು ಕೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಮದುವೆಯಾದ ಎರಡೇ ದಿನಕ್ಕೆ ವಧು ನಿಗೂಢ ಸಾವು; ವರದಕ್ಷಿಣೆ ಹತ್ಯೆ ಎಂದು ಕುಟುಂಬ ಆರೋಪ

AIADMKಯಿಂದ ಮತ್ತಷ್ಟು ಫ್ರೀಬೀಸ್ ಘೋಷಣೆ; ಪ್ರತಿ ಕುಟುಂಬಕ್ಕೆ 10,000 ರೂ. ನೆರವು!

SCROLL FOR NEXT