ನಟ ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಕೇಸು: ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ನಟ ದರ್ಶನ್, ಇತರ ಆರೋಪಿಗಳು ಹಾಜರು

ಪ್ರಕರಣದ ಸಾಕ್ಷಿಗಳಾಗಿ ರೇಣುಕಾಸ್ವಾಮಿ ಅವರ ತಂದೆ ಕಾಶಿನಾಥಯ್ಯ ಮತ್ತು ತಾಯಿ ರತ್ನಪ್ರಭಾ ಬಿಗಿ ಭದ್ರತೆಯಲ್ಲಿ ನ್ಯಾಯಾಲಯದ ಮುಂದೆ ಹಾಜರಾದರು.

ಬೆಂಗಳೂರು: ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಆರಂಭವಾಗಿದೆ. ಪ್ರಮುಖ ಆರೋಪಿ ನಟ ದರ್ಶನ್, ಅವರ ಆಪ್ತ ಗೆಳತಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾದರು.

ನವೆಂಬರ್ 3 ರಂದು, ನ್ಯಾಯಾಲಯವು ದರ್ಶನ್ ಮತ್ತು ಕೊಲೆ ಪ್ರಕರಣದ ಇತರ 16 ಆರೋಪಿಗಳ ವಿರುದ್ಧ ಆರೋಪ ಹೊರಿಸಿತ್ತು.

ಪ್ರಕರಣದ ಸಾಕ್ಷಿಗಳಾಗಿ ರೇಣುಕಾಸ್ವಾಮಿ ಅವರ ತಂದೆ ಕಾಶಿನಾಥಯ್ಯ ಮತ್ತು ತಾಯಿ ರತ್ನಪ್ರಭಾ ಬಿಗಿ ಭದ್ರತೆಯಲ್ಲಿ ನ್ಯಾಯಾಲಯದ ಮುಂದೆ ನಿನ್ನೆ ಹಾಜರಾದರು.

ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ಪ್ರಕರಣ ವಿಚಾರಣೆಯನ್ನು ಇಂದಿಗೆ ಮುಂದೂಡಿದೆ.

ವಿಚಾರಣೆಯ ಸಮಯದಲ್ಲಿ, ಪವಿತ್ರಾ ಗೌಡ ಅವರ ಪರ ವಕೀಲರು ರತ್ನಪ್ರಭಾ ಅವರನ್ನು ಪ್ರಶ್ನಿಸಿದರು. ಅವರು ಪೊಲೀಸ್ ತನಿಖೆಗೆ ಸಂಬಂಧಿಸಿದಂತೆ ಹಲವಾರು ಪ್ರಶ್ನೆಗಳನ್ನು ಎತ್ತಿದರು.

ಸೋಷಿಯಲ್ ಮೀಡಿಯಾದಲ್ಲಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಚಿತ್ರದುರ್ಗದ ಮೆಡಿಕಲ್ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ 33 ವರ್ಷದ ರೇಣುಕಾಸ್ವಾಮಿ ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಜೂನ್ 9, 2024 ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಸುಮನಹಳ್ಳಿ ಬಳಿ ಶೆಡ್ ನಲ್ಲಿ ಕೊಂದುಹಾಕಿ ಮಳೆನೀರಿನ ಚರಂಡಿಯಲ್ಲಿ ಶವವನ್ನು ಎಸೆಯಲಾಗಿತ್ತು ಎಂದು ಆರೋಪಿಸಲಾಗಿದೆ.

ಪೊಲೀಸರು 17 ಆರೋಪಿಗಳ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಪವಿತ್ರಾ ಗೌಡ ಅವರನ್ನು ಎ1 ಮತ್ತು ದರ್ಶನ್ ಅವರನ್ನು ಎ2 ಆರೋಪಿ ಎಂದು ಸೆಕ್ಷನ್ 302 (ಕೊಲೆ), 359 (ಅಪಹರಣ), 120 ಬಿ (ಕ್ರಿಮಿನಲ್ ಪಿತೂರಿ), 204 (ಸಾಕ್ಷ್ಯ ನಾಶಮಾಡಲು ಪ್ರಯತ್ನ) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ಸೆಕ್ಷನ್‌ಗಳ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

'Mogambo Khush Hai': ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ತಗ್ಗಿದ ಅಪರಾಧ ಪ್ರಮಾಣ: ಗಡಿಗಳ ಮೂಲಕ ಅಕ್ರಮ ಬಾಂಗ್ಲಾದೇಶಿಗಳ ಪ್ರವೇಶ; ಗಡಿ ಕಾಪಾಡುವ ಜವಾಬ್ದಾರಿ ಯಾರದ್ದು?

ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು: SIT ತನಿಖೆ ವೇಳೆ ಮಾಹಿತಿ ಬಹಿರಂಗ!

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

SCROLL FOR NEXT