ನಟಿ ರನ್ಯಾ ರಾವ್ online desk
ರಾಜ್ಯ

Gold Smuggling Case: ನಟಿ ರನ್ಯಾ ರಾವ್​ಗಿಲ್ಲ ರಿಲೀಫ್; ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974(COFEPOSA ಕಾಯ್ದೆ, 1974) ಅಡಿಯಲ್ಲಿ ಬಂಧನ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಹಾಗೂ ಇತರ ಆರೋಪಿಗಳಾದ ತರುಣ್ ರಾಜ್ ಮತ್ತು ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974(COFEPOSA ಕಾಯ್ದೆ, 1974) ಅಡಿಯಲ್ಲಿ ಬಂಧನ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ ಬಂಧಿತ ನಟಿಯ ತಾಯಿ ಹರ್ಷವರ್ಧಿನಿ ರಾವ್ ಹಾಗೂ ಇತರು ಇಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ವಿಜಯ್ ಕುಮಾರ್ ಪಾಟೀಲ್ ಅವರನ್ನೊಳಗೊಂಡ ಪೀಠ, ಅರ್ಜಿದಾರರ ವಾದವನ್ನು ತಳ್ಳಿ ಹಾಕಿದೆ.

ಬಂಧನ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಮೂವರು ಆರೋಪಿಗಳ ಬಂಧನ ಕಾನೂನುಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ, ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB)COFEPOSA ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಕಾಯ್ದೆ ಅನ್ವಯ ಆರೋಪಿ ರನ್ಯಾ ರಾವ್‌ಗೆ ಒಂದು ವರ್ಷ ಜಾಮೀನು ಪಡೆಯಲು ಅವಕಾಶವಿರುವುದಿಲ್ಲ.

ಕಳೆದ ಮಾರ್ಚ್​ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ)ದ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ

ರೌಡಿ ಶೀಟರ್ 'ಬಿಕ್ಲು ಶಿವು' ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ನಿರೀಕ್ಷಣಾ ಜಾಮೀನು, ನಿರಾಕರಿಸಿದ ಹೈಕೋರ್ಟ್!

ಒಮನ್ ಭೇಟಿ ವೇಳೆ ಮೋದಿ ಹೊಸ ಸ್ಟೈಲ್ ಬಗ್ಗೆ ಭಾರಿ ಚರ್ಚೆ: ಪ್ರಧಾನಿ ಕಿವಿಗೆ ಧರಿಸಿದ್ದೇನು?

ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ: ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಬೆಂಗಳೂರು: ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ 'ಕಾಲಿನಿಂದ ಒದ್ದು' ವಿಕೃತಿ! ಪಕ್ಕದ ಮನೆಯ ಆರೋಪಿ ಬಂಧನ, ಬಿಡುಗಡೆ

SCROLL FOR NEXT