ಬೈರತಿ ಬಸವರಾಜು 
ರಾಜ್ಯ

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ನಿರೀಕ್ಷಣಾ ಜಾಮೀನು ನಿರಾಕರಣೆ: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

ಸದ್ಯ ತಮ್ಮ ಬೈರತಿಯ ನಿವಾಸದಲ್ಲೂ ಬಸವರಾಜ್ ಇಲ್ಲ ಎಂದು ಗೊತ್ತಾಗಿದೆ. ಸಿಐಡಿ ಅಧಿಕಾರಿಗಳ ಮೂರು ತಂಡ ರಚಿಸಿ ಶಾಸಕರಿಗಾಗಿ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರೋ ಶಾಸಕ ಬೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದೆ. ಹೀಗಾಗಿ ಶಾಸಕರು ತಲೆಮರೆಸಿಕೊಂಡಿದ್ದು, ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ನಿನ್ನೆಯಷ್ಟೇ ಹೈಕೋರ್ಟ್ ನಲ್ಲಿ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ವಜಾ ಆಗಿತ್ತು.‌ ಇದರ ಬೆನ್ನಲ್ಲೆ ಬಸವರಾಜ್ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ಸದ್ಯ ತಮ್ಮ ಬೈರತಿಯ ನಿವಾಸದಲ್ಲೂ ಬಸವರಾಜ್ ಇಲ್ಲ ಎಂದು ಗೊತ್ತಾಗಿದೆ. ಸಿಐಡಿ ಅಧಿಕಾರಿಗಳ ಮೂರು ತಂಡ ರಚಿಸಿ ಶಾಸಕರಿಗಾಗಿ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ನಡೆದ ವಿಧಾನಸೌಧ ಅಧಿವೇಶನದಲ್ಲಿ ಮೊದಲ ವಾರ ಬೈರತಿ ಬಸವರಾಜ್ ಹಾಜರಾಗಿದ್ದರು. ಆದರೆ ಈ ವಾರ ಅಧಿವೇಶನಕ್ಕೆ ಬಾರದ ಬೈರತಿ ಬಸವರಾಜ್ ಅಜ್ಞಾತ ಸ್ಥಳ ಸೇರಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.

ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ ಗೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲಿಯವರೆಗೂ ಭೈರತಿ ಬಸವರಾಜುಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ದಾವಣಗೆರೆ-ಹರಿಹರ ಅವಳಿ ನಗರ ಅಭಿವೃದ್ಧಿಗೆ 'ಮಾಸ್ಟರ್ ಪ್ಲಾನ್ 2041' ಕ್ಕೆ ಸರ್ಕಾರದ ಅನುಮೋದನೆ!