ಸಿಎಂ ಸಿದ್ದರಾಮಯ್ಯ, ಮತ್ತಿತರರು 
ರಾಜ್ಯ

ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ; 'ಭೂಮಿ'ಯನ್ನು ಬಂಜೆ ಮಾಡಬಾರದು: ಸಿಎಂ ಸಿದ್ದರಾಮಯ್ಯ

ತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ‌. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ‌ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿದರು.

ಬೆಳಗಾವಿ:ರಾಜ್ಯ ಸರ್ಕಾರ ರೈತ ಪರ ವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿದರು.

ತಾಲೂಕಿನ ಹುದಲಿ ಗ್ರಾಮದಲ್ಲಿ ಆಯೋಜಿಸಿದ್ದ ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ‌. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ‌ ಎಂದರು.

ಭಾರತ ಕೃಷಿ ಪ್ರಧಾನ ರಾಷ್ಟ್ರ: ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಶೇ. 90 ರಷ್ಟು ಕೃಷಿ ಮೇಲೆಯೇ ಅವಲಂಬಿತವಾಗಿದೆ. ರೈತರಿಗೆ ಬೇಕಾದ ಸಹಾಯ ಮಾಡುವುದು ಸರಕಾರಗಳ ಜವಾಬ್ದಾರಿಯಾಗಿದೆ.ನೀರಿನ ನಿರ್ವಹಣೆ ಕುರಿತು ಪ್ರತಿಯೊಬ್ಬರು ತಿಳಿದುಕೊಂಡು ನೀರನ್ನು ಮಿತವಾಗಿ ಬಳಸಬೇಕು. ಈ ಕುರಿತು‌ ಕೃಷಿ ಇಲಾಖೆ ಪ್ರತಿ ರೈತರ ಹತ್ತಿರ ಹೋಗಿ ಇಲಾಖೆಯಿಂದ ಪರಿಚಯಿಸಲಾಗುವ ಹೊಸ ತಳಿಗಳ ಕುರಿತು ಮಾಹಿತಿ ನೀಡಬೇಕು. ಕಳೆದ ಆಯವ್ಯಯಲ್ಲಿ ಘೋಷಿಸಿದಂತೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ರೈತರು ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಸಬ್ಸಿಡಿ ಮೂಲಕ ಹೊಸ ಯಂತ್ರೋಪಕರಣಗಳನ್ನು ವಿತರಿಸುತ್ತಿದೆ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ: ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ ಮಾಡಲಾಗುತ್ತಿದೆ.ಅಲ್ಲಿನ ರೈತರು ಕೃಷಿ ಇಲಾಖೆಯಿಂದ ಜಾರಿಯಲ್ಲಿರುವ ಸಾಕಷ್ಟು ಯೋಜನೆಗಳ ಲಾಭ ಪಡೆದು ಅಭಿವೃದ್ಧಿಪರ ಕೃಷಿ ಮಾಡುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ರೈತರಿಗೆ ಹೊಸ ಹೊಸ ತಂತ್ರಜ್ಞಾನ ಬಳಕೆ, ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಕೃಷಿಯನ್ನು ಲಾಭದಾಯಕ‌ವಾಗಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ

ಒಳನುಸುಳುವವರನ್ನು ಹೊರಗಿಡಲು SIR; ಆದ್ರೆ ದಶಕಗಳಿಂದ ಕಾಂಗ್ರೆಸ್ ಅವರನ್ನು ರಕ್ಷಿಸಿತ್ತು: ಪ್ರಧಾನಿ ಮೋದಿ

BMC election: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಉದ್ಧವ್ ಠಾಕ್ರೆ, ಶರದ್ ಪವಾರ್ ಜತೆ ಮೈತ್ರಿ ಇಲ್ಲ

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!

'ಜಗತ್ತಿನಲ್ಲಿ ಅಧಿಕಾರದ ಅರ್ಥ ಈಗ ಬದಲಾಗಿದೆ...'; ಅಮೆರಿಕ-ಚೀನಾ ಜೊತೆ ಸಂಬಂಧ ವೃದ್ಧಿ ಮತ್ತಷ್ಟು ಜಟಿಲ: ಜೈಶಂಕರ್

SCROLL FOR NEXT