ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ  
ರಾಜ್ಯ

ಬೆಂಗಳೂರು: ಬೆಳಗಾವಿ ಅಧಿವೇಶನ ಮುಗಿಸಿ ಬಂದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ

ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯ ಮತ್ತು ಇಂದು ಸಂಜೆ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕನ್ನಡ ಮಾಧ್ಯಮ ಲೋಕದ ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ಇಂದು ಶನಿವಾರ ನಿಧನರಾಗಿದ್ದಾರೆ.

ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯ ಮತ್ತು ಇಂದು ಸಂಜೆ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದ ಬೊಮ್ಮಯ್ಯ ಅವರು ನಿಧನ ಹೊಂದಿರುವುದು ಅವರ ಕುಟುಂಬ ವರ್ಗ ಮತ್ತು ಅವರ ಗೆಳೆಯರ ವಲಯದಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.

ನಿನ್ನೆಯಷ್ಟೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಸುದ್ದಿ ವರದಿ ಕೆಲಸ ಮುಗಿಸಿ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಬೆಳಗ್ಗೆ ಮೆಜೆಸ್ಟಿಕ್ ನಲ್ಲಿ ಬಸ್ಸಿನಿಂದ ಇಳಿದಾಗಲೇ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಬಸ್ಸಿನಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದವರಾದ ದೊಡ್ಡಬೊಮ್ಮಯ್ಯ, ಬೆಂಗಳೂರಿನಲ್ಲಿ ಸಂಜೆವಾಣಿ ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿ ಸಹ ಅರೆಕಾಲಿಕ ವೃತ್ತಿ ಮಾಡುತ್ತಿದ್ದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ 'ರಹದಾರಿ': ಪ್ರಧಾನಿ ಮೋದಿ ಮಾತಿನ ಮರ್ಮವೇನು?

ಟಿ-20 ವಿಶ್ವಕಪ್: ಭಾರತ ತಂಡ ಪ್ರಕಟ, ಶುಭ್ ಮನ್ ಗಿಲ್ ಗೆ ಕೊಕ್‌, ಇಶಾನ್ ಕಿಶಾನ್ ಗೆ ಸ್ಥಾನ!

ಹಿಂದೂ ಯುವಕನ ಬರ್ಬರ ಹತ್ಯೆ: ವ್ಯಾಪಕ ಆಕ್ರೋಶ ಬೆನ್ನಲ್ಲೆ 7 ಆರೋಪಿಗಳನ್ನು ಬಂಧಿಸಿದ್ದಾಗಿ ಯೂನಸ್ ಘೋಷಣೆ

ಕಲಬುರಗಿ: ಉದ್ಯಮಿ ಮಲ್ಲಿನಾಥ್ ಬಿರಾದಾರ್ ಮನೆ ಬಳಿ ಬೆಂಕಿ ಹಚ್ಚಿಕೊಂಡು BJP ಕಾರ್ಯಕರ್ತೆ ಆತ್ಮಹತ್ಯೆ

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

SCROLL FOR NEXT