ಸಂಗ್ರಹ ಚಿತ್ರ 
ರಾಜ್ಯ

6 ವಾಹನಕ್ಕೆ ಗುದ್ದಿ ಟ್ರಕ್ ಪರಾರಿ: 10 ಕಿ.ಮೀ ಬೆನ್ನಟ್ಟಿ ಚಾಲಕನ ಹಿಡಿದ ಸ್ಥಳೀಯರು, ಹಿಗ್ಗಾಮುಗ್ಗಾ ಥಳಿತ..!

ಉತ್ತರ ಪ್ರದೇಶ ನೋಂದಣಿಯ ಟ್ರಕ್ ಅತ್ತಿಬೆಲೆ ಗೋದಾಮಿನಿಂದ ಚಂದಾಪುರ ಕಡೆಗೆ ಹೋಗುತ್ತಿತ್ತು. ಮದ್ಯದ ಅಮಲಿನಲ್ಲಿದ್ದ ಚಾಲಕ ಮೊದಲು ಆನೇಕಲ್‌ನಲ್ಲಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ಆನೇಕಲ್‌: ವಿವಿಧ ಸ್ಥಳಗಳಲ್ಲಿ 6ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಪಾನಮತ್ತ ಚಾಲಕನೊಬ್ಬನನ್ನು 10 ಕಿ.ಮೀ.ವರೆಗೂ ಬೆನ್ನಟ್ಟಿ ಹಿಡಿದ ಪೊಲೀಸರ, ನಂತರ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಆನೇಕಲ್ ತಾಲ್ಲೂಕಿನ ಚಂದಾಪುರ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಪ್ರೇಮ್ (25) ಟ್ರಕ್ ಚಲಾಯಿಸುತ್ತಿದ್ದ ಚಾಲಕನಾಗಿದ್ದಾನೆ. ಉತ್ತರ ಪ್ರದೇಶ ನೋಂದಣಿಯ ಟ್ರಕ್ ಅತ್ತಿಬೆಲೆ ಗೋದಾಮಿನಿಂದ ಚಂದಾಪುರ ಕಡೆಗೆ ಹೋಗುತ್ತಿತ್ತು. ಮದ್ಯದ ಅಮಲಿನಲ್ಲಿದ್ದ ಚಾಲಕ ಮೊದಲು ಆನೇಕಲ್‌ನಲ್ಲಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯಲ್ಲಿ ಇಭ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಲ್ಲಿಂದ ಪರಾರಿಯಾಗಿರುವ ಚಾಲಕ ನಂತರ, ಸೂರ್ಯ ನಗರದಲ್ಲಿ ಮೂರು ವಾಹನಗಳು ಮತ್ತು ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಬಳಿಕ ಸ್ಥಳೀದಲ್ಲಿದ್ದ ವಾಹನ ಚಾಲಕರು, ಟ್ರಕ್ ಚಾಲಕನನ್ನು ಸುಮಾರು 10 ಕಿ.ಮೀವರೆಗೂ ಬೆನ್ನತ್ತಿದ್ದು, ನಂತರ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸರ ವಶಕ್ಕೆ ನೀಡಿದ್ದಾರೆ.

ನಂತರ ಪೊಲೀಸರು ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಾಗಿದ್ದು, ಗಾಯಗೊಂಡ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT