ಬಳ್ಳಾರಿ: ಬಳ್ಳಾರಿಯ ಹುಸೇನ್ ನಗರದಲ್ಲಿ ಮಹಿಳೆಯೊಬ್ಬರು ವಿಡಿಯೋ ಕಾಲ್ ಲೈವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತಳನ್ನು 23 ವರ್ಷದ ಮುನ್ನಿ ಎಂದು ಗುರುತಿಸಲಾಗಿದೆ. ಮುನ್ನಿ ಮನೆಯಲ್ಲಿ ಲೈವ್ ವಿಡಿಯೋದಲ್ಲಿ ಮಾತನಾಡುತ್ತಿದ್ದಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ಮಕ್ಕಳ ತಾಯಿ ಮುನ್ನಿ ಗಂಡನ ಬಿಟ್ಟು 6 ತಿಂಗಳಿನಿಂದ ಒಬ್ಬರೇ ವಾಸಿಸುತ್ತಿದ್ದರು. ಈ ಮಧ್ಯೆ ಮೊಹಮ್ಮದ್ ಶೇಖ್ ಎಂಬಾತನ ಪರಿಚಯವಾಗಿದೆ. ಇಬ್ಬರು ಆತ್ಮೀಯವಾಗಿದ್ದರು. ಆದರೆ ಕೆಲ ದಿನಗಳಿಂದ ಇಬ್ಬರ ನಡುವೆ ಜಗಳ ಶುರುವಾಗಿದ್ದು ಇದರಿಂದ ನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.