ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್: ತೊಗರಿ ಬೇಳೆಗೆ 8000 ರೂ. ಬೆಂಬಲ ಬೆಲೆ ನಿಗದಿ..!

ಪ್ರತಿ ಕ್ವಿಂಟಾಲ್‌ಗೆ 8,000 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ಗಳಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ಮಾಹಿತಿಯ ಆಧಾರದ ಮೇಲೆ ರೈತರಿಂದ ತೊಗರಿ ಖರೀದಿಸಲಾಗುತ್ತದೆ.

ಬಳ್ಳಾರಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ (FAq) ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಹೇಳಿದ್ದಾರೆ.

ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ 2025–26ನೇ ಸಾಲಿನ ಮುಂಗಾರು ಹಂಗಾಮಿನ ತೊಗರಿ ಉತ್ಪನ್ನವನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ರೈತರಿಂದ ತೊಗರಿ ಖರೀದಿ ನಡೆಸಲಾಗುವುದು ಎಂದು ಹೇಳಿದರು.

ಪ್ರತಿ ಕ್ವಿಂಟಾಲ್‌ಗೆ 8,000 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ಗಳಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ಮಾಹಿತಿಯ ಆಧಾರದ ಮೇಲೆ ರೈತರಿಂದ ತೊಗರಿ ಖರೀದಿಸಲಾಗುತ್ತದೆ. ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಫ್ರೂಟ್ಸ್ ತಂತ್ರಾಂಶದ ಆಧಾರದಲ್ಲಿ ಖರೀದಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರೈತರ ನೋಂದಣಿ ಕಾರ್ಯವು 80 ದಿನಗಳವರೆಗೆ ನಡೆಯಲಿದ್ದು, ಖರೀದಿ ಪ್ರಕ್ರಿಯೆ 90 ದಿನಗಳವರೆಗೆ ಜಾರಿಯಲ್ಲಿರಲಿದೆ. ಖರೀದಿ ಪ್ರಕ್ರಿಯೆಗೆ ಅಗತ್ಯವಿರುವ ಗೋದಾಮುಗಳನ್ನು ಶುದ್ಧವಾಗಿ ನಿರ್ವಹಿಸಬೇಕು. ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಖರೀದಿ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ತೂಕ ಪ್ರಮಾಣೀಕರಣ ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಖರೀದಿ ಕೇಂದ್ರಗಳಲ್ಲಿ ರೈತರು ನೋಂದಣಿ ಮಾಡಿಸುವಾಗ ಆಧಾರ್ ಕಾರ್ಡ್, ಪಹಣಿ ಪತ್ರಿಕೆ ಹಾಗೂ ಆಧಾರ್ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸ್‌ಬುಕ್ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು. ಪಿ.ಓ.ಎಸ್ ಯಂತ್ರದ ಮೂಲಕ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಆಧಾರ್ ಬಯೋಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದ್ದು, ರೈತರು ಸಹಕರಿಸಬೇಕೆಂದು ಮನವಿ ಮಾಡಿದರು.

ಅದೇ ರೀತಿ, ರೈತರು ತಮ್ಮ ಫ್ರೂಟ್ಸ್ ಐ.ಡಿ ಯೊಂದಿಗೆ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳುವ ಕುರಿತು ಅಗತ್ಯ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ- ನ್ಯೂಜಿಲೆಂಡ್ 'ಮುಕ್ತ ವ್ಯಾಪಾರ ಒಪ್ಪಂದ' ಅಂತಿಮ: ಭಾರಿ ಪ್ರಮಾಣದ ಸುಂಕ ಕಡಿತ! Video

ನಾಯಕತ್ವ ಬದಲಾವಣೆ ಬಗ್ಗೆ ಹೆಚ್ಚು ಚರ್ಚಿಸುತ್ತಿರುವುದು ನೀವು, ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ?: ಮಾಧ್ಯಮಗಳ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ

ಮುಂಬೈ ತೆರಳುತ್ತಿದ್ದ Air India ವಿಮಾನ ತುರ್ತು ಭೂಸ್ಪರ್ಶ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!

ರಷ್ಯಾ ಸೇನೆ ಸೇರಲು ಒತ್ತಾಯ: ಉಕ್ರೇನ್ ನಿಂದ SOS ವಿಡಿಯೋ ಕಳಿಸಿದ ಗುಜರಾತ್ ವಿದ್ಯಾರ್ಥಿ!

Op Sindoor:'ದೇವರ ದಯೆ'ಯಿಂದ ಬದುಕುಳಿದಿದ್ದೇವೆ, ಕೊನೆಗೊ ಸತ್ಯ ಒಪ್ಪಿಕೊಂಡ ಅಸಿಮ್ ಮುನೀರ್!

SCROLL FOR NEXT