ಕೇಂದ್ರ ಸಚಿವ ವಿ. ಸೋಮಣ್ಣ ಅವರೊಂದಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ 
ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ: ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದೇನು..?

ಕನ್ನಡದಲ್ಲೇ ರೈಲ್ವೆ ಇಲಾಖೆ ಪರೀಕ್ಷೆ ಬರೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಪ್ಪಿದ್ದು, ನಾನು ಹಾಗೂ ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಇಬ್ಬರೂ ಪ್ರಧಾನಿಗಳಿಗೆ ಒತ್ತಡ ಹಾಕಿ ಒಪ್ಪಿಸಿದ್ದೇವೆ.

ನವದೆಹಲಿ: ರಾಜ್ಯ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆ ಸಮರ, ಬಣ ಬಡಿದಾಟಗಳು ಗರಿಗೆದರಿರುವಂತೆ ಬಿಜೆಪಿ ಪಾಳಯದಲ್ಲೂ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಹಗ್ಗ ಜಗ್ಗಾಟ ನಡೆಯುತ್ತಿದೆ.

ತೆರೆಮರೆಯಲ್ಲಿ ಮತ್ತೆ ಬಿಜೆಪಿ ರೆಬೆಲ್​ ನಾಯಕರು ತಮ್ಮ ತಂತ್ರಗಾರಿಕೆ ಶುರುಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಬಂಡಾಯ ನಾಯಕರೊಂದಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಅವರೂ ಕೂಡ ಲಾಬಿ ನಡೆಸುತ್ತಿದ್ದಾರೆಂದ ಮಾತುಗಳು ಕೇಳಿ ಬಂದಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೋಮಣ್ಣ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ನನಗೆ ಯಾವುದೇ ಆಸಕ್ತಿಯಿಲ್ಲ. ಪಕ್ಷದ ಹೈಕಮಾಂಡ್ ಈಗಾಗಲೇ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದೆ. ಈ ಗೌರವದಿಂದ ತೃಪ್ತನಾಗಿದ್ದೇನೆಂದು ಹೇಳಿದ್ದಾರೆ.

ಕೋಲಾರ ಸಂಸದ ಮಲ್ಲೇಶ್ ಬಾಬು ಅವರ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಾನು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಈ ಕುರಿತು ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯ ಮೇರೆಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ತುಮಕೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇನೆ. ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಬಿಜೆಪಿ ಈಗಾಗಲೇ ಗೌರವ ನೀಡಿದೆ ಎಂದು ತಿಳಿಸಿದರು.

ಕನ್ನಡದಲ್ಲೇ ರೈಲ್ವೆ ಪರೀಕ್ಷೆ ಬರೆಯಲು ಪ್ರಧಾನಿ ಮೋದಿ ಒಪ್ಪಿಗೆ

ಇದೇ ವೇಳೆ ಕನ್ನಡದಲ್ಲೇ ರೈಲ್ವೆ ಇಲಾಖೆ ಪರೀಕ್ಷೆ ಬರೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಪ್ಪಿದ್ದು, ನಾನು ಹಾಗೂ ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಇಬ್ಬರೂ ಪ್ರಧಾನಿಗಳಿಗೆ ಒತ್ತಡ ಹಾಕಿ ಒಪ್ಪಿಸಿದ್ದೇವೆಂದು ಹೇಳಿದರು.

ಕನ್ನಡದಲ್ಲೇ ರೈಲ್ವೆ ಪ್ರವೇಶ ಪರೀಕ್ಷೆ ಬರೆಯಬೇಕು ಎಂಬ ಕನ್ನಡಿಗರ ಬಹುದಿನಗಳ ಬೇಡಿಕೆ ಶೀಘ್ರ ಈಡೇರಲಿದೆ. ಮೋದಿಯವರು ಈಗಾಗಲೇ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದ್ವೇಷ ಭಾಷಣ ಕಾಯ್ದೆ ಮಂಡನೆ ಕುರಿತು ಪ್ರತಿಕ್ರಿಯಿಸಿ, ಸಂಸ್ಕಾರ, ಸಂಸ್ಕೃತಿ ಗೊತ್ತಿಲ್ಲದವರು ಹೀಗೆಲ್ಲ ಮಾಡುತ್ತಾರೆ.. ಇದು ಮೊಂಡುತನದ ಪರಮಾವಧಿ. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ನಿಮಿತ್ತ ಅಷ್ಟೇ, ರಾಜ್ಯ ಸರ್ಕಾರ ಮಾಡಿಸುತ್ತಿದೆ. ಪಾಪದ ಕೊಡ ತುಂಬಿರೋದರಿಂದ ಪಾಪದ ಕೆಲಸ ಮಾಡುತ್ತಿದ್ದಾರೆ. ಕಾಯ್ದೆ ಜಾರಿಗೆ ತಂದಿರುವರೇ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದರು.

ರಾಜಕೀಯದಲ್ಲಿ ಸಿಎಂ ಬೇಳೆಕಾಳು ಬೇಯುತ್ತಿಲ್ಲ. ಹಳೇ ಸಿದ್ದರಾಮಯ್ಯ ಇವತ್ತಿಲ್ಲ, ಹೊಸ ಸಿದ್ದರಾಮಯ್ಯ ಅವರೂ ಇಲ್ಲ. ಪರಮೇಶ್ವರ್ ಸಿಎಂ ಆಗಲಿ ಅಂತ ನಾನು ಭಾಷಣ ಮಾಡಿಲ್ಲ. ಪರಮೇಶ್ವರ್ ಅವರು ತೊಟ್ಟಿಲು ತೂಗುತ್ತಾರೆ, ಮಗುವನ್ನೂ ಅಳಿಸುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಷ್ಯಾ ಸೇನೆ ಸೇರಲು ಒತ್ತಾಯ: ಉಕ್ರೇನ್ ನಿಂದ SOS ವಿಡಿಯೋ ಕಳಿಸಿದ ಗುಜರಾತ್ ವಿದ್ಯಾರ್ಥಿ!

GOAT tour: ಭಾರತ ಪ್ರವಾಸಕ್ಕೆ 'ಲಿಯೋನೆಲ್ ಮೆಸ್ಸಿ' ಗೆ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ? ಒಟ್ಟಾರೇ ಖರ್ಚಿನ ವಿವರ ಬಹಿರಂಗ!

ಕ್ರಿಸ್ ಮಸ್ ಆಚರಣೆ ಸಾಧ್ಯವಾಗಿರಿಸಿರುವುದು ಸೋನಿಯ ಗಾಂಧಿ ತ್ಯಾಗ: ರೇವಂತ್ ರೆಡ್ಡಿ

ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆ: ಆರೋಪ ಸರಿಯಲ್ಲ, ವಿಯನ್ನಾ ಒಪ್ಪಂದಕ್ಕೆ ಬದ್ಧ; ಬಾಂಗ್ಲಾದೇಶಕ್ಕೆ ಭಾರತ ತಿರುಗೇಟು

ನೈಋತ್ಯ ರೈಲ್ವೆಯ 89% ಹಳಿಗಳು ವಿದ್ಯುದೀಕರಣ; ಬೆಂಗಳೂರು ವಿಭಾಗದಲ್ಲಿ 99% ಪೂರ್ಣ

SCROLL FOR NEXT