ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯನ್ನು ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿ ಬಚಾವಾಗಲು ಯತ್ನಿಸಿ ಪೊಲೀಸ್ ಬಲೆಗೆ ಬಿದ್ಧ ಘಟನೆ ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದ ಮಿಟ್ಟಗಾನಹಳ್ಳಿ ನಿವಾಸಿ ಗಾಯತ್ರಿ ಕೊಲೆಯಾದ ಮಹಿಳೆ. ಅವರು ದೈಹಿಕ ಶಿಕ್ಷಣ ಶಿಕ್ಷಕಿಯಾಗಿದ್ದರು. ಅವರ ಪತಿ ಅನಂತ್ ನಿವೃತ್ತ ಖಾಸಗಿ ಕಂಪನಿ ಉದ್ಯೋಗಿ. ಸಂತ್ರಸ್ತೆ ಮಗಳು ಕಾಲೇಜು ವಿದ್ಯಾರ್ಥಿನಿ. ಪೊಲೀಸರ ಪ್ರಕಾರ, ದಂಪತಿ ಕೌಟುಂಬಿಕ ವಿಷಯಗಳಿಗಾಗಿ ಆಗಾಗ್ಗೆ ಜಗಳವಾಡುತ್ತಿದ್ದರು. ಕೆಲವು ದಿನಗಳ ಹಿಂದೆ ಅನಂತ್ ಗಾಯತ್ರಿಯನ್ನು ಕೊಲ್ಲಲು ಸಂಚು ರೂಪಿಸಿದ್ದರು.
ಬಾಗಲೂರಿನಲ್ಲಿರುವ ಸೈಟ್ ಸ್ವಚ್ಛಗೊಳಿಸುವ ನೆಪದಲ್ಲಿ ಗಾಯತ್ರಿ ಅವರನ್ನು ಕರೆದೊಯ್ದಿದ್ದಾನೆ. ಈ ವೇಳೆ ದಾರಿಯಲ್ಲಿ ಹೋಗುವಾಗ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ನಂತರ ಗಾಯತ್ರಿ ಅಪಘಾತಕ್ಕೆ ಒಳಗಾಗಿದ್ದಾರೆ ಎಂಬಂತೆ ನಾಟಕವಾಡಿ ಅಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ.
ಚಿಕ್ಕಜಾಲ ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆಗ ಅವರಿಗೆ ಇದು ಅಪಘಾತವಲ್ಲ ಎಂಬುದು ಅರಿವಿಗೆ ಬಂದಿದೆ.
ಕೊಲೆ ಅನುಮಾನ ವ್ಯಕ್ತವಾಗಿದೆ. ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ಗಾಯತ್ರಿಯ ಗಾಯಗಳ ಸ್ವರೂಪ ಪರಿಶೀಲಿಸಿದ ಬಳಿಕ ಪ್ರಕರಣ ಬಯಲಾಗಿದ್ದು, ತಕ್ಷಣ ಬಾಗಲೂರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ಎಂಬುದು ದೃಢಪಟ್ಟಿದೆ.