ಶಾಸಕ ಭೈರತಿ ಬಸವರಾಜ್ 
ರಾಜ್ಯ

ರೌಡಿಶೀಟರ್ ಕೊಲೆ ಪ್ರಕರಣ: ಬಿಜೆಪಿ ಶಾಸಕನಿಗೆ ಬಿಗ್ ಶಾಕ್; ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಪ್ರಸ್ತುತ ತಲೆ ಮರೆಸಿಕೊಂಡಿರುವ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಮಂಗಳವಾರ ಕೋರ್ಟ್ ವಜಾಗೊಳಿಸಿದೆ.

ಪ್ರಸ್ತುತ ತಲೆ ಮರೆಸಿಕೊಂಡಿರುವ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಭೈರತಿ ಬಸವರಾಜ್‌ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲೂ ಬಂಧಿಸಬಹುದು.

ಭೈರತಿ ಬಸವರಾಜ್ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ರೆ, ಸಿಐಡಿ ಪರ ಎಸ್‌ಪಿಪಿ ಅಶೋಕ್ ನಾಯ್ಕ್ ಅವರು ವಾದ ಮಂಡಿಸಿದರು.

ಈಗಾಗಲೇ ಕೋರ್ಟ್​​ಗೆ ಚಾರ್ಜ್​ಶೀಟ್​ ಪ್ರತಿ ಸಲ್ಲಿಕೆ ಮಾಡಿದ್ದು, ಚಾರ್ಜ್​ಶೀಟ್​ನ ಪೇಜ್ ನಂ.298ರಲ್ಲಿ ಟವರ್ ಲೊಕೇಷನ್ ನಮೂದಿಸಿದೆ. ಎ1 ಮತ್ತು ಎ 5 ನಡುವೆ ದೂರವಾಣಿ ಮಾತುಕತೆ ಇರುವ ದಾಖಲೆಯಿದೆ. ಬಂಧಿಸಿ ವಿಚಾರಣೆಗೆ ಒಳಪಡಿಸಿದ ನಂತರ ಹೆಚ್ಚಿನ ಮಾಹಿತಿ ತಿಳಿಯಲಿದೆ. ಹೀಗಾಗಿ ಜಾಮೀನು ನೀಡದಂತೆ ಎಸ್ಎಸ್ ಪಿ ಅಶೋಕ್ ನಾಯ್ಕ್​ ಅವರು ವಾದಿಸಿದರು.

ಇದಕ್ಕೆ ಪ್ರತಿಯಾಗಿ ಭೈರತಿ ಬಸವರಾಜ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ ಅವರು, ತಮ್ಮ ಕಕ್ಷಿದಾರರು ಕೊಲೆಯಲ್ಲಿ ಭಾಗಿಯಾಗಿರುವುದಕ್ಕೆ ಇದುವರೆಗೂ ಯಾವುದೇ ಸಾಕ್ಷ್ಯಗಳು ಲಭ್ಯವಿಲ್ಲ. 5 ತಿಂಗಳಾದರೂ ಇವರಿಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಎ1 ಜಗ್ಗ, ಎ 5 ಭೈರತಿ ಬಸವರಾಜ್ ನಡುವಿನ ಸಂಪರ್ಕ ಸಾಬೀತಿಗೆ ಯತ್ನಿಸುತ್ತಿದ್ದಾರೆ ಎಂದರು.

ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ತೊರೆಯುವವರಿಗೆ 3 ಸಾವಿರ ಡಾಲರ್ ಸ್ಟೈಫಂಡ್: ಅಕ್ರಮ ವಲಸಿಗರಿಗೆ ಟ್ರಂಪ್ ಕ್ರಿಸ್‌ಮಸ್ ಆಫರ್

ಭಗವಾನ್ ರಾಮ ಓರ್ವ ಮುಸ್ಲಿಮ್: ವಿವಾದದ ಕಿಡಿ ಹೊತ್ತಿಸಿದ ತೃಣಮೂಲ ಕಾಂಗ್ರೆಸ್ ಶಾಸಕ!

20 ವರ್ಷಗಳ ನಂತರ ಬಿಎಂಸಿ ಚುನಾವಣೆಗಾಗಿ ಒಂದಾದ ಠಾಕ್ರೆ ಸಹೋದರರು!

ಸುದೀಪ್ ಮುಂದೆ ಮಾಜಿ ಶಾಸಕ ರಾಜುಗೌಡ ನೀಡಿದ್ದ 'ಕಾಂಜಿ, ಪೀಂಜಿ' ಹೇಳಿಕೆಗೆ ದರ್ಶನ್ ಅಭಿಮಾನಿಗಳ ತಿರುಗೇಟು!

ಕರಾವಳಿ ಮೂಲಕ ಬೆಂಗಳೂರು-ಗೋವಾ ವಂದೇ ಭಾರತ್ ರೈಲು ಆರಂಭಿಸಿ: ರೈಲ್ವೆ ಸಚಿವರಿಗೆ HDK ಮನವಿ

SCROLL FOR NEXT