ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ  
ರಾಜ್ಯ

'ಸಿದ್ದರಾಮಯ್ಯ ಅವರು ಡೊನಾಲ್ಡ್ ಟ್ರಂಪ್ ಅವರ ಆರ್ಥಿಕ ಸಲಹೆಗಾರರಾದರೆ ಉತ್ತಮ': ಹೆಚ್ ಡಿ ಕುಮಾರಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ತೆರಿಗೆ ಹಾಕುವುದರಲ್ಲಿ ನಿಪುಣರು. ಅವರು ಹೋಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದರೆ ಉತ್ತಮ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ತೆರಿಗೆ ಹಾಕುವುದರಲ್ಲಿ ನಿಪುಣರು. ಅವರು ಹೋಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದರೆ ಉತ್ತಮ. ಇದರಿಂದ ಟ್ರಂಪ್‌ಗೆ ಸಹಾಯವಾಗಬಹುದು ಮತ್ತು ಕರ್ನಾಟಕ ರಾಜ್ಯಕ್ಕೂ ಒಳ್ಳೆಯದಾಗಬಹುದು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಲೇವಡಿ ಮಾಡಿದ್ದಾರೆ.

ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಸಾಕಷ್ಟು ಹೋರಾಟ ಮಾಡುತ್ತಿದ್ದಾರೆ. ಸರಿಯಾದ ಪರಿಣತರು ಸಿಗದೇ ನರಳುತ್ತಿದ್ದಾರೆ. ಸಿದ್ದರಾಮಯ್ಯನವರ ಆರ್ಥಿಕ ಜ್ಞಾನಕ್ಕೆ ಕರ್ನಾಟಕ ತುಂಬಾ ಚಿಕ್ಕದು. ಟ್ರಂಪ್ ಇಡೀ ಜಗತ್ತಿಗೆ ಏನೋ ಮಾಡಲು ಹೊರಟಿದ್ದಾರೆ. ಸಿದ್ದರಾಮಯ್ಯ ಟ್ರಂಪ್ ಜೊತೆಗಿದ್ದರೆ ಎಲ್ಲರಿಗೂ ಒಳ್ಳೆಯದಾಗುತ್ತದೆ' ಎಂದು ಲೇವಡಿ ಮಾಡಿದರು.

ಮುಂದಿನ ಬಜೆಟ್ ನ್ನು ನಾನೇ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರೆ, ಬೇರೆಯವರು ದೇವರ ಬಳಿ ಮಾತನಾಡಿದ್ದೇನೆ ಎನ್ನುತ್ತಾರೆ. ಇನ್ನು 45 ದಿನಗಳಲ್ಲಿ ಏನಾಗುತ್ತೋ ಕಾದು ನೋಡೋಣ. ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದು ನಮಗೆ ಮುಖ್ಯವಲ್ಲ. ನನಗೆ ಬೇಕಾಗಿರುವುದು ರಾಜ್ಯದ ಅಭಿವೃದ್ಧಿ ಎಂದರು.

ರಾಜ್ಯದ ಜನತೆ ಹಣವನ್ನು ಲೂಟಿ ಮಾಡಲಾಗುತ್ತಿದೆ. ಹೆಲಿಕಾಪ್ಟರ್ ಪ್ರಯಾಣಕ್ಕೆ 47 ಕೋಟಿ ರೂಪಾಯಿ ವ್ಯಯಿಸಲಾಗಿದೆ. ನನಗೆ ಇಂದು ಆರೋಗ್ಯ ಸರಿಯಿಲ್ಲದಿದ್ದರೂ ರಸ್ತೆ ಮಾರ್ಗವಾಗಿ ಬಾಳೆಹೊನ್ನೂರಿಗೆ ಬಂದಿದ್ದೇನೆ. ರಸ್ತೆಗಳನ್ನು ನೋಡಿದರೆ ಅಭಿವೃದ್ಧಿ ಕಾಣುತ್ತಿದೆ. ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವುದು ತಪ್ಪು ಎಂದು ನಾನು ಹೇಳುತ್ತಿಲ್ಲ. ಆದರೆ ಮೈಸೂರಿನಿಂದ ಚಾಮರಾಜನಗರಕ್ಕೆ ಬರಲು ಕೇವಲ ಅರ್ಧ ಗಂಟೆ ತೆಗೆದುಕೊಳ್ಳುತ್ತದೆ ಎಂದಾದರೆ ಅಲ್ಲಿಗೆ ಹೆಲಿಕಾಪ್ಟರ್‌ನಲ್ಲಿ ಹೋಗುವುದೇಕೆ ಎಂದು ಕೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹದಗೆಟ್ಟ ಸಂಬಂಧ: ಭಾರತದಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಬಾಂಗ್ಲಾ

ಕರೆನ್ಸಿ ನೋಟುಗಳಿಂದ ಗಾಂಧೀಜಿ ಚಿತ್ರ ತೆಗೆದುಹಾಕಲು ಸರ್ಕಾರ ಚಿಂತನೆ, ಉನ್ನತ ಮಟ್ಟದ ಸಭೆ ಕೂಡ ನಡೆದಿದೆ: ಸಿಪಿಎಂ ಸಂಸದ ಜಾನ್ ಬ್ರಿಟಾಸ್

Lokayukta raid-ಭ್ರಷ್ಟ ಅಧಿಕಾರಿಗಳ ವಿರುದ್ಧ ಮುಂದುವರಿದ ಲೋಕಾಯುಕ್ತ ಬೇಟೆ: ತೀವ್ರ ಶೋಧ

ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದ: 3 ತಿಂಗಳಲ್ಲಿ ಜಾರಿ, ಇದರಿಂದ ಲಾಭವೇನು?

ರಘುನಾಥ್‌ ಹತ್ಯೆ ಕೇಸ್‌: TTD ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು- DYSP ಸೇರಿ ಮೂವರನ್ನು ಬಂಧಿಸಿದ ಸಿಬಿಐ

SCROLL FOR NEXT