ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ಭಾರಿ ಮುಖಭಂಗವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್, ಉತ್ತರ ಕನ್ನಡದ ಮಂಕಿ ಪಟ್ಟಣ ಪಂಚಾಯತ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಮತ್ತು ರಾಯಚೂರು ಜಿಲ್ಲೆಯ ತುರವಿಹಾಳ ಪಟ್ಟಣ ಪಂಚಾಯತ್ಗಳ ತಲಾ 1 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿಗೆ ಗೆಲುವಿನ ನಗೆ ಬೀರಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ಗ್ಯಾರಂಟಿಗಳ ಸದ್ದು ಅಡಗಿದೆ, ಅಭಿವೃದ್ಧಿಯ ಮಂತ್ರ ಗೆದ್ದಿದೆ! ದೊಡ್ಡಬಳ್ಳಾಪುರ ನಗರಸಭೆ ಮತ್ತು ತುರ್ವಿಹಾಳ ಉಪಚುನಾವಣೆಯಲ್ಲೂ ಬಿಜೆಪಿಗೆ ಜಯ. ಅಧಿಕಾರದಲ್ಲಿದ್ದರೂ ಸ್ಥಳೀಯ ಸಂಸ್ಥೆಗಳನ್ನು ಗೆಲ್ಲಲಾಗದ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ರಾಜ್ಯದ ಜನತೆ ಕಾಂಗ್ರೆಸ್ ಆಡಳಿತವನ್ನು ತಿರಸ್ಕರಿಸುತ್ತಿದ್ದಾರೆ ಎನ್ನುವುದಕ್ಕೆ ಇದೇ ಸಾಕ್ಷಿ. ಮುಂದಿನದು ಬಿಜೆಪಿ ಸರ್ಕಾರ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.