ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು ಆತನ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು.