ಸಾವು ಎಂತಹ ವ್ಯಕ್ತಿ, ಸಮಾಜವನ್ನೇ ಅಲ್ಲಾಡಿಸಿ ಬಿಡುತ್ತದೆ. ಈ ವರ್ಷವಂತೂ ದೇಶದಲ್ಲಿ ಹಲವು ಗಣ್ಯರು, ಸಾಧಕರು ನಮ್ಮನಗಲಿದ್ದಾರೆ. ರಾಷ್ಟ್ರ ರಾಜಕಾರಣ, ಸಿನಿಮಾ ಹಾಗೂ ಇತರೆ ವಲಯಗಳಲ್ಲಿ ಮೇರು ವ್ಯಕ್ತಿಗಳ ಸಾವು ಸಾಕಷ್ಟು ನೋವು ತಂದಿದೆ. ಈ ವರ್ಷ ಇಹಲೋಕ ತ್ಯಜಿಸಿದವರು ಯಾರು ಎಂಬುದರ ಸಂಕ್ಷಿಪ್ತ ವಿವರ ಇಲ್ಲಿವೆ...
ಕನ್ನಡ ಚಿತ್ರರಂಗದ ದಿಗ್ಗಜ ನಟಿ ಬಿ. ಸರೋಜಾ ದೇವಿ ಅವರು ಜುಲೈ 14ರಂದು ಬೆಂಗಳೂರಿನಲ್ಲಿ ತಮ್ಮ 87ನೇ ವಯಸ್ಸಿನಲ್ಲಿ ನಿಧನರಾದರು.
ಆನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಎಂ.ಎಸ್. ಉಮೇಶ್ ಅವರು ನವೆಂಬರ್ 30ರಂದು ಬೆಂಗಳೂರಿನಲ್ಲಿ ನಿಧನರಾದರು.
ಬ್ಲಾಕ್ಬಸ್ಟರ್ 'ಕೆಜಿಎಫ್' ಮೂಲಕ 'ಕೆಜಿಎಫ್ ಚಾಚಾ' ಎಂದೇ ಜನಪ್ರಿಯರಾಗಿದ್ದ ನಟ ಹರೀಶ್ ರಾಯ್ 4ನೇ ಹಂತದ ಥೈರಾಯ್ಡ್ ಕ್ಯಾನ್ಸರ್ ವಿರುದ್ಧ ಹೋರಾಡಿ ಬೆಂಗಳೂರಿನಲ್ಲಿ ನಿಧನರಾದರು. ಹರೀಶ್ ರಾಯ್ ಅವರಿಗೆ 55 ವರ್ಷ ವಯಸ್ಸಾಗಿತ್ತು.
ಖ್ಯಾತ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಅವರು ಅಕ್ಟೋಬರ್ 13ರಂದು ತಮ್ಮ 62ನೇ ವಯಸ್ಸಿನಲ್ಲಿ ನಿಧನರಾದರು.
ರಂಗಭೂಮಿ ಕಲಾವಿದ, ಸೂಪರ್ ಹಿಟ್ 'ರಾಮ ಶಾಮ ಭಾಮ' ಸಿನಿಮಾ ಖ್ಯಾತಿಯ ಹಾಸ್ಯ ನಟ ಯಶವಂತ್ ಸರದೇಶಪಾಂಡೆ ಹೃದಯಾಘಾತದಿಂದ ಸೆಪ್ಟಂಬರ್ 29ರಂದು ಕೊನೆಯುಸಿರೆಳೆದರು.
ವಯೋಸಹಜ ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು, ಏಪ್ರಿಲ್ 14ರಂದು ತಮ್ಮ 75ನೇ ವಯಸ್ಸಿನಲ್ಲಿ ನಿಧನರಾದರು.
ಜನಪ್ರಿಯ ಕನ್ನಡ, ತುಳು ನಟ ಮತ್ತು ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿಜೇತ ರಾಕೇಶ್ ಪೂಜಾರಿ, ಮೇ 11ರಂದು ತಮ್ಮ 34ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು.
ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅಲಿಯಾಸ್ ಚನ್ನೇಗೌಡ ಅವರು ನವೆಂಬರ್ 12ರಂದು ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.
'ಪಾರು' ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಾಯಕ್ ಮೇ 26ರಂದು ನಿಧನರಾದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕನ್ನಡದ ಹಿರಿಯ ನಟ ಮತ್ತು ರಂಗಭೂಮಿ ಕಲಾವಿದ ಸರಿಗಮ ವಿಜಿ ಅವರು ಜನವರಿ 15ರಂದು ತಮ್ಮ 76ನೇ ವಯಸ್ಸಿನಲ್ಲಿ ನಿಧನರಾದರು.
ಶಿವರಾಜ್ಕುಮಾರ್, ರವಿಚಂದ್ರನ್ ಹಾಗೂ ಉಪೇಂದ್ರ ಅವರಂತಹ ಸ್ಟಾರ್ ನಟರ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಮುರಳಿ ಮೋಹನ್ ಆಗಸ್ಟ್ 13ರಂದು ನಿಧನರಾದರು.
ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್ ಪಾರ್ಟಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಆಗಸ್ಟ್ 25ರಂದು ಕುಂದಾಪುರದ ಕೋಟೇಶ್ವರ ಸರ್ಜನ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಗುಜರಾತ್‌ನಲ್ಲಿನ ವಿಶ್ವದ ಅತಿ ಎತ್ತರದ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಪ್ರಸಿದ್ಧ ಶಿಲ್ಪಿ ರಾಮ್ ಸುತಾರ್ ಅವರು ನೋಯ್ಡಾದ ತಮ್ಮ ನಿವಾಸದಲ್ಲಿ ಡಿ.17ರಂದು ವಿಧಿವಶರಾಗಿದ್ದರು.ಅವರಿಗೆ 100ವರ್ಷ ವಯಸ್ಸಾಗಿತ್ತು.
ಕಾಂಗ್ರೆಸ್ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.
ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಸಾಲು ಮರದ ತಿಮ್ಮಕ್ಕ ನ.14 ರಂದು ನಿಧನರಾಗಿದ್ದರು. ಅವರಿಗೆ 114 ವರ್ಷ ವಯಸ್ಸಾಗಿತ್ತು.
ಹಿರಿಯ ಸಾಹಿತಿ, ಕಾದಂಬರಿಕಾರ ಎಸ್.ಎಲ್. ಭೈರಪ್ಪನವರು ಸೆ. 24ರಂದು ನಿಧನರಾಗಿದ್ದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ಅವರು ನವೆಂಬರ್ 24ರಂದು ನಿಧನರಾದರು, ಧರ್ಮೇಂದ್ರ ಅವರಿಗೆ 89 ವರ್ಷ ವಯಸ್ಸಾಗಿತ್ತು.
ಬಾಲಿವುಡ್ ನಟಿ, ʻಹುಡುಗರುʼ ಸಿನಿಮಾದಲ್ಲಿ ʻಪಂಕಜಾʼ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ 42 ವರ್ಷ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು.
ಕೈಗಾರಿಕಾ ಉದ್ಯಮಿ ಮತ್ತು ಕರಿಷ್ಮಾ ಕಪೂರ್ ಅವರ ಮಾಜಿ ಪತಿ ಸಂಜಯ್ ಕಪೂರ್ 2025ರ ಜೂನ್ 12ರಂದು ಲಂಡನ್‌ನಲ್ಲಿ ಗಾಲ್ಫ್ ಆಡುತ್ತಿರುವಾಗ 53ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಹಠಾತ್ತನೆ ನಿಧನರಾದರು.