ಬೆಂಗಳೂರು: ಯಲಹಂಕದಲ್ಲಿನ ಲಾಡ್ಜ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ದೇವನಹಳ್ಳಿ ನಿವಾಸಿಗಳಾದ ಜೀವನ್ (21) ಮತ್ತು ಚೇತನ್ (26) ಎಂದು ಗುರುತಿಸಲಾಗಿದೆ. 17 ವರ್ಷದ ಅಪ್ರಾಪ್ತ ಬಾಲಕ ಪ್ರಕರಣದ ಪ್ರಮುಖ ಆರೋಪಿಗಳಾಗದ್ದು, ಬಾಲಕನನ್ನು ಬಾಲ ನ್ಯಾಯ ಮಂಡಳಿ (ಜುವೆನೈಲ್ ಜಸ್ಟಿಸ್ ಬೋರ್ಡ್) ಮುಂದೆ ಹಾಜರುಪಡಿಸಲಾಗಿದೆ.
ಪ್ರಮುಖ ಆರೋಪಿ ಅಪ್ರಾಪ್ತ ಬಾಲಕನಾಗಿದ್ದಾನೆ. ಈತ ವಿದ್ಯಾರ್ಥಿನಿಯ ಸ್ನೇಹಿತನಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಉಳಿದ ಇಬ್ಬರು ಕೃತ್ಯಕ್ಕೆ ಸಹಕಾರ ನೀಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪ್ರಾಪ್ತ ಬಾಲಕ ಮತ್ತು ಸಂತ್ರಸ್ತೆ ಆರು ತಿಂಗಳ ಹಿಂದೆ ಕಾಲೇಜಿನ ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹ ಬೆಳೆಸಿಕೊಂಡಿದ್ದರು. ಗುರುವಾರ ರಾತ್ರಿ ಬಾಲಕ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾರಿನಲ್ಲಿ ವಿದ್ಯಾರ್ಥಿನಿಯನ್ನು ಯಲಹಂಕದಲ್ಲಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.
ಅಲ್ಲಿ ಆಕೆಗೆ ಬಲವಂತದಿಂದ ಮದ್ಯಪಾನಕ್ಕೆ ಮಾಡಿದ್ದು, ನಂತರ ಆಕೆಯ ಮೇಲೆ ಬಾಲಕ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ವಿದ್ಯಾರ್ಥಿನಿ ಮನೆಗೆ ಹಿಂದಿರುಗದೇ ಇದ್ದ ಕಾರಣ, ಆಕೆಯ ಪೋಷಕರು ಆತಂಕ್ಕೊಳಗಾಗಿದ್ದಾರೆ. ಮೊಬೈಲ್ ಫೋನ್ ಸ್ವಿಚ್ ಆಫ್ ಬಂದಿದ್ದು, ನಂತರ ಯಲಹಂಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.