ಗುಂಡೇಟಿಗೆ ಬಲಿಯಾಗಿರುವ ಕೃಷ್ಣಮೃಗ 
ರಾಜ್ಯ

ಚಿಕ್ಕಮಗಳೂರು: ಗುಂಡೇಟಿನಿಂದ ಮೂರು ಕೃಷ್ಣಮೃಗಗಳು ಸಾವು; ಬೇಟೆಗಾರರ ಮೇಲೆ ಶಂಕೆ!

ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಇವು ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು: ಇಲ್ಲಿನ ಕಡೂರು ತಾಲ್ಲೂಕಿನಲ್ಲಿ ಮೂರು ಕೃಷ್ಣಮೃಗಗಳು ಶಂಕಿತ ಗುಂಡೇಟಿನಿಂದ ಸಾವಿಗೀಡಾಗಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಾಸೂರು ಅಮೃತ ಮಹಲ್ ಕಾವಲಿನ ಕೃಷ್ಣಮೃಗ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಸಗಿ ಕೃಷಿ ಭೂಮಿಯಲ್ಲಿ ಮಂಗಳವಾರ ಮೂರು ಕೃಷ್ಣಮೃಗಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಇವು ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯರಿಂದ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಗುಂಡೇಟಿನ ಪುರಾವೆಗಳು ಮತ್ತು ಸಮೀಪದಲ್ಲಿ ವಾಹನಗಳು ಸಂಚರಿಸಿರುವ ಗುರುತುಗಳು ಕಂಡುಬಂದಿವೆ ಎಂದು ಮೂಲಗಳು ತಿಳಿಸಿವೆ.

ಅಧಿಕಾರಿಗಳ ಪ್ರಕಾರ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಅಪರಾಧಿಗಳನ್ನು ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.

ಬೇಟೆಗಾರರ ಗುಂಡೇಟಿಗೆ ಕೃಷ್ಣಮೃಗಗಳು ಬಲಿಯಾಗಿರಬಹುದು ಎಂದು ಕೆಲವು ಸ್ಥಳೀಯರು ಮತ್ತು ಪರಿಸರವಾದಿಗಳಿಂದ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!