ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ.
ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಈ ದುರಂತ ನಡೆದಿದ್ದು, ಅರಮನೆಯ ಜಯಮಾರ್ತಾಂಡ ದ್ವಾರದ ಊಟಿ ರಸ್ತೆಯ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಸಿಲಿಂಡರ್ ಸ್ಫೋಟಗೊಂಡಿದೆ.
ಈ ವೇಳೆ ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ನೈಟ್ರೋಜನ್ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ ಅರಮನೆಯಲ್ಲಿ ಮಾಗಿ ಉತ್ಸವ ನಡೆಯುತ್ತಿದ್ದು, ಇದಕ್ಕಾಗಿ ಅರಮನೆಗೆ ದೀಪಾಲಂಕಾರ ಮಾಡಲಾಗಿತ್ತು.
ಹೀಗಾಗಿ ಪ‍್ರವಾಸಿಗರು ಹೆಚ್ಚಿದ್ದರು. ಹೀಗಾಗಿ ನೈಟ್ರೋಜನ್ ಬಲೂನ್ ಮಾರುವಾತ ಅಲ್ಲಿಗೆ ಬಂದು ವ್ಯಾಪಾರ ನಡೆಸುತ್ತಿದ್ದ. ಈ ವೇಳೆ ಗ್ಯಾಸ್ ಸಿಲಿಂಡರ್ ಒಡೆದು ಈ ದುರ್ಘಟನೆ ಸಂಭವಿಸಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.