ಪ್ರಧಾನಿ ನರೇಂದ್ರ ಮೋದಿ-ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜ್ಯ

ಚಿತ್ರದುರ್ಗ ಬಸ್ ದುರಂತ: ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು.

ಬೆಂಗಳೂರು: ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 11 ಮಂದಿ ಸಜೀವ ದಹನಗೊಂಡಿದ್ದು, ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಹೇಳಿದ್ದಾರೆ.

ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ.

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಏತನ್ಮಧ್ಯೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​: 9 ಮಂದಿ ಸಜೀವ ದಹನ; ಹಲವರಿಗೆ ಗಂಭೀರ ಗಾಯ, ತನಿಖೆಗೆ ಆದೇಶ

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ: ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ನಂಟು; ಸಿಎಂ ಪಿಣರಾಯಿ ಗಂಭೀರ ಆರೋಪ

ಗಾಂಧೀಜಿ ಫೋಟೋ ಇಟ್ಟುಕೊಂಡು ಚುನಾವಣೆ ನಡೆಸಿದ್ದೀರಾ? ಡಿಕೆಶಿ ಮಾಡುತ್ತಿರುವಷ್ಟು ಪೂಜೆ ನಾನು ಮಾಡಿಲ್ಲ; ಸಿದ್ದರಾಮಯ್ಯನವರೂ ಮಾಡಲು ಸಾಧ್ಯವಿಲ್ಲ'

ನೈಸ್ ಪ್ರಕರಣ: ರಿಟ್ ಅರ್ಜಿಯಲ್ಲಿ ನನ್ನ ಹೆಸರು ಉಲ್ಲೇಖ; ಈ ಇಳಿ ವಯಸ್ಸಿನಲ್ಲೂ ನಾನು ಕೋರ್ಟ್ ಅಲೆಯಬೇಕೇ? ದೇವೇಗೌಡ ಬೇಸರ

ಕಾಂಬೋಡಿಯಾ- ಥಾಯ್ಲೆಂಡ್ ಸಂಘರ್ಷ: ಗಡಿಯಲ್ಲಿದ್ದ 30 ಅಡಿಯ ವಿಷ್ಣು ಪ್ರತಿಮೆ ಧ್ವಂಸ; ಭಾರತ ಕಳವಳ

SCROLL FOR NEXT