ಸಾಂದರ್ಭಿಕ ಚಿತ್ರ 
ರಾಜ್ಯ

'ಭೂ ಪರಿವರ್ತನೆ' ಈಗ ಸರಳ: ಭೂ ಕಂದಾಯ ಕಾಯ್ದೆ ತಿದ್ದುಪಡಿಗೆ ಅಂತಿಮ ಅಧಿಸೂಚನೆ!

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಭಾರತ ದೇಶ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಇತ್ತೀಚಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, 'ಭೂ ಪರಿವರ್ತನೆ' ಈಗ ಸರಳವಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಭಾರತ ದೇಶ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಯೋಜನಾ ಘಟಕವನ್ನು ನಿರ್ಮಿಸಲು ಭೂ ಪರಿವರ್ತನೆ ಅಗತ್ಯ ಇಲ್ಲ ಎಂದಿದ್ದಾರೆ.

ಭೂ ಪರಿವರ್ತನೆಗೆ ಸಂಬಂಧಿಸಿದ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ. ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮ ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ. ಆರ್‌ಸಿಸಿಎಂಎಸ್‌ ಸೇರಿದಂತೆ ಡಿಜಿಟೈಸೇಷನ್‌ ಮುಖಾಂತರ ಆದೇಶಗಳನ್ನು ನೀಡಲಾಗುವುದು. ಇವು ಸುಧಾರಣಾ ಕಾನೂನುಗಳಿಗೆ ನ್ಯಾಯಿಕ ಬಲವನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.

ಕಾನೂನು ಮೀರಿ ಯಾರೂ ನ್ಯಾಯಧಾನ ನೀಡಲು ಸಾಧ್ಯವಿಲ್ಲ. ಹೀಗಾಗಿ ವಿವಿಧ ಕಲಂಗಳು ಹಾಗೂ ನಿಯಮಗಳಿಗೆ ತಿದ್ದುಪಡಿ ಮೂಲಕ ಜಾರಿಗೊಳಿಸಲಾಗಿದೆ. ಕಂದಾಯ ನ್ಯಾಯಾಲಯಗಳನ್ನು ಆನ್‌ಲೈನ್‌ ಮುಖಾಂತರ ನಡೆಸಲು ಕಾನೂನು ತರಲಾಗಿದೆ ಎಂದು ಹೇಳಿದ್ದಾರೆ.

ವಾದಿ ಹಾಗೂ ಪ್ರತಿವಾದಿಗಳು ಕಚೇರಿಗಳಿಗೆ ಸುತ್ತುವುದರ ಬದಲಿಗೆ ಅವರು ಆನ್‌ಲೈನ್‌ ಮುಖಾಂತರವೇ ನ್ಯಾಯಾಲಯ ಕಲಾಪಗಳಿಗೆ ಭಾಗವಹಿಸುವ ಸುಲಭ ಮಾರ್ಗ ನೀಡಲಾಗಿದೆ. ಅದೇ ರೀತಿ ಭೂ ಸುರಕ್ಷಾ ಮೋಜನಿಗೆ ಈಗ ಕಾನೂನಿನ ಬಲ ಒದಗಿಸಲಾಗಿದ್ದು, ನಿಯಮಗಳಲ್ಲಿ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರು ಅರಮನೆ ಬಳಿ ಸಿಲಿಂಡರ್‌ ಸ್ಪೋಟ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಭಾರತ- ಅಮೆರಿಕ ನಡುವಿನ ಸಂಬಂಧ ಹಳ್ಳಹಿಡಿಸಲು ಯತ್ನದ ಆರೋಪ: ಚೀನಾ ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ: ವರದಿ

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video

40 ಲಕ್ಷ ರೂ ವೆಚ್ಚದ ಅದ್ಧೂರಿ ಮದುವೆ.. ಹನಿಮೂನ್ ಅರ್ಧಕ್ಕೇ ಮೊಟಕು, ನವವಿವಾಹಿತೆ ಆತ್ಮಹತ್ಯೆ! ಆಗಿದ್ದೇನು?

SCROLL FOR NEXT