ಬೀದಿ ನಾಯಿ ಹಾವಳಿ 
ರಾಜ್ಯ

ಬೆಂಗಳೂರು: ಬೀದಿ ನಾಯಿಗಳ ದತ್ತು ಪಡೆಯಲು GBA ಅವಕಾಶ..!

ಜಿಬಿಎಯ ಪಶುಸಂಗೋಪನೆ ಇಲಾಖೆಯಿಂದ ಯೋಜನೆ ಜಾರಿ ಮಾಡಲಾಗಿದ್ದು, ಮಾನವೀಯತೆ ದೃಷ್ಟಿಯಿಂದ ಬೀದಿ ನಾಯಿಗಳನ್ನು ಸಾಕುವುದಕ್ಕೆ ಅವಕಾಶ ನೀಡಲಾಗಿದೆ.

ಬೆಂಗಳೂರು: ಬೀದಿ ನಾಯಿಗಳನ್ನು ದತ್ತು ಪಡೆಯಲು ಪ್ರಾಣಿಪ್ರಿಯರಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅವಕಾಶ ನೀಡಿದೆ.

ನಗರ ವ್ಯಾಪ್ತಿಯಲ್ಲಿ ಇರುವ ಬೀದಿ ನಾಯಿಗಳನ್ನು ದತ್ತು ಪಡೆದು ಸಾಕಲು ಮುಂದಾಗುವ ಶ್ವಾನ ಪ್ರಿಯರಿಗೆ ಕೇಂದ್ರ ನಗರ ಪಾಲಿಕೆಯಿಂದ ಹೊಸ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಜಿಬಿಎಯ ಪಶುಸಂಗೋಪನೆ ಇಲಾಖೆಯಿಂದ ಯೋಜನೆ ಜಾರಿ ಮಾಡಲಾಗಿದ್ದು, ಮಾನವೀಯತೆ ದೃಷ್ಟಿಯಿಂದ ಬೀದಿ ನಾಯಿಗಳನ್ನು ಸಾಕುವುದಕ್ಕೆ ಅವಕಾಶ ನೀಡಲಾಗಿದೆ.

ಯೋಜನೆಯಡಿ ಸಾರ್ವಜನಿಕರು, ಸಂಘ ಸಂಸ್ಥೆಗಳು, ಅಪಾರ್ಟ್‌ಮೆಂಟ್‌ ನಿವಾಸಿಗಳು, ಸ್ವಯಂಸೇವಾ ಸಂಸ್ಥೆಗಳು ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ ನೀಡಲಾಗಿದೆ.

ಜಿಬಿಎಯಿಂದ ದತ್ತು ಪಡೆಯುವ ನಾಯಿಗಳಿಗೆ ಉಚಿತವಾಗಿ ಅರೋಗ್ಯ ತಪಾಸಣೆ, ರ್ಯಾಬಿಸ್‌‍ ಲಸಿಕೆ, ಸಂತಾನ ನಿರೋಧಕ ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು. ಅಸಕ್ತಿ ವ್ಯಕ್ತಿಗಳು ಜಿಬಿಎ ಪಶುಪಾಲನೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಬೀದಿ ನಾಯಿಗಳ ದತ್ತಕವು ಪ್ರಾಣಿಕಲ್ಯಾಣವನ್ನು ಉತ್ತೇಜಿಸುವುದರ ಜೊತೆಗೆ ನಗರದಲ್ಲಿ ಸಹಬಾಳ್ವೆ ಮತ್ತು ಸಾರ್ವಜನಿಕ ಆರೋಗ್ಯದ ರಕ್ಷಣೆಗೆ ಸಹಕಾರಿಯಾಗುತ್ತದೆ. ಆಸಕ್ತ ವ್ಯಕ್ತಿಗಳು ಮತ್ತು ಸಂಸ್ಥೆಗಳು ಹೆಚ್ಚಿನ ಮಾಹಿತಿಗಾಗಿ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಬೆಂಗಳೂರು ಕೇಂದ್ರ ನಗರ ನಿಗಮವನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಬೆಂಗಳೂರಿನ ಕೇಂದ್ರ ನಗರ ಮಹಾನಗರ ಪಾಲಿಕೆ (BCCC)ಯ ಪಶುವೈದ್ಯರು ಮಾತನಾಡಿ, ನಮ್ಮ ವ್ಯಾಪ್ತಿಯಲ್ಲಿ 30,000 ಬೀದಿ ನಾಯಿಗಳಿದ್ದು, ಸುಪ್ರೀಂ ಕೋರ್ಟ್ ಆದೇಶದ ಆಧಾರದ ಮೇಲೆ, ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಹಾಸ್ಟೆಲ್‌ಗಳು, ಆಟದ ಮೈದಾನಗಳು, ಬಸ್ ನಿಲ್ದಾಣಗಳು, ಡಿಪೋಗಳು, ಉದ್ಯಾನವನಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಿಂದ ಸ್ಥಳಾಂತರಿಸಲು 800 ನಾಯಿಗಳನ್ನು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!