ಸುಟ್ಟು ಕರಕಲಾಗಿರುವ ಬಸ್ 
ರಾಜ್ಯ

Chitradurga Bus tragedy: ಮೃತದೇಹಗಳ ಬೋನ್ ಸ್ಯಾಂಪಲ್ ಪಡೆದ ವೈದ್ಯರು, DNA ಪರೀಕ್ಷೆಗೆ ರವಾನೆ..!

ಮೃತದೇಹಗಳ ಡಿಎನ್ಎ ಪರೀಕ್ಷೆಗಾಗಿ ಮೃತರ ಸಂಬಂಧಿಕರ ರಕ್ತದ ಮಾದರಿಗಳನ್ನು ವೈದ್ಯರು ಸಂಗ್ರಹಿಸಿದ್ದು, ಇದೀಗ ಬೋನ್ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಹುಬ್ಬಳ್ಳಿ ಲ್ಯಾಬ್'ಗೆ ರವಾನಿಸಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ಸಂಭವಿಸಿದ ಬಸ್ ಬಸ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಈ ನಡುವೆ ಮೃತದೇಹಗಳ ಅಸ್ಥಿಪಂಜರಗಳ ಸ್ಯಾಂಪಲ್ ಪಡೆದಿರುವ ವೈದ್ಯರು ಡಿಎನ್ಎ ಪರೀಕ್ಷೆಗೆ ರವಾನಿಸಿದ್ದಾರೆಂದು ತಿಳಿದುಬಂದಿದೆ.

ಮೃತದೇಹಗಳ ಡಿಎನ್ಎ ಪರೀಕ್ಷೆಗಾಗಿ ಮೃತರ ಸಂಬಂಧಿಕರ ರಕ್ತದ ಮಾದರಿಗಳನ್ನು ವೈದ್ಯರು ಸಂಗ್ರಹಿಸಿದ್ದು, ಇದೀಗ ಬೋನ್ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಹುಬ್ಬಳ್ಳಿ ಲ್ಯಾಬ್'ಗೆ ರವಾನಿಸಿದ್ದಾರೆ.

ಒಂದೆರಡು ದಿನದಲ್ಲಿ ಡಿಎನ್‌ಎ ವರದಿ ಪಡೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ತ್ವರಿತವಾಗಿ ವರದಿ ನೀಡುವಂತೆ ಮನವಿ ಮಾಡುವ ಭರವಸೆ ನೀಡಿದ್ದಾರೆ.

ಡಿಎನ್‌ಎ ವರದಿ ಬಂದ ಬಳಿಕ ಖಚಿತವಾಗಿ ಮೃತರ ಗುರುತು ಪತ್ತೆಯಾಗಲಿದೆ. ಆ ನಂತರ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆ ಸರ್ಜನ್ ಡಾ.ರವೀಂದ್ರ ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿನ್ನೆ ದುರ್ಘಟನೆ ಸಂಭವಿಸಿತ್ತು. ಲಾರಿಯೊಂದು ಬಸ್ಸಿಗೆ ಡಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿತ್ತು. ಘಟನೆ ವೇಳೆ ಬಸ್ ನಲ್ಲಿ ಒಟ್ಟು 33 ಪ್ರಯಾಣಿಕರಿದ್ದರು ಎನ್ನಲಾಗಿದ್ದು, 6 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇದರೊಂದಿಗೆ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್​

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ; ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಅವನತಿಯತ್ತ: ಎಚ್‌ಡಿ ಕುಮಾರಸ್ವಾಮಿ

ಚಿತ್ರದುರ್ಗ ಬಸ್ ದುರಂತ: ಖಾಸಗಿ ಬಸ್ ಚಾಲಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

TNIE ವರದಿ ಫಲಶೃತಿ: ಸ್ವಚ್ಛತೆ ಪರಿಶೀಲಿಸಲು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಪಿಗೆ ಭೇಟಿ

SCROLL FOR NEXT