ದಾವಣಗೆರೆ: ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ ಮಾಡಲು ಹೋಗಿ ರೈತರೊಬ್ಬರು ಸಜೀವ ದಹನವಾಗಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕುರುವ ಗ್ರಾಮದಲ್ಲಿ ನಡೆದಿದೆ,
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದ ಈಶ್ವರಪ್ಪ (75ವ) ಎಂಬುವವರ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ತಾಳೆ ಮರ ಬೆಳೆಯಲಾಗಿದ್ದು, ಇದ್ದಕ್ಕಿದ್ದಂತೆ ತಾಳೆ ಮರಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಗಾಬರಿಗೊಂಡ ರೈತ ಈಶ್ವರಪ್ಪ ಬೆಂಕಿ ನಂದಿಸಲು ಹೋಗಿ ತಾವೇ ಸಜೀವ ದಹನಗೊಂಡಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಸುಟ್ಟು ಕರಕಲಾದ ಮನೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಸುಟ್ಟು ಕರಕಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಐಕೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಎಲ್ಲರೂ ಕೆಲಸಕ್ಕೆ ಹೋದಾಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮಹೆಬೂಬ್ ಎನ್ನುವವರಿಗೆ ಸೇರಿದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಇಡೀ ಮನೆ ವ್ಯಾಪಿಸಿಕೊಂಡಿತು. ಪರಿಣಾಮ ಮನೆಯಲ್ಲಿದ್ದ 2 ಲಕ್ಷ ನಗದು ಹಾಗೂ 30 ಗ್ರಾಂ ಚಿನ್ನ ಸುಟ್ಟು ಕರಲಾಗಿದೆ.
ರಾಗಿ ಮೆದೆಗೆ ಬೆಂಕಿ
ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಅಗ್ನಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳು ಬೇಕಂತಲೇ ರಾಗಿ ಮೆದೆಗೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ. ಇದರಿಂದ ಒಕ್ಕಣೆ ಮಾಡಲು ಹಾಕಲಾಗಿದ್ದ ರಾಗಿ ಮೆದೆ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.