ಮೃತ ಯುವಕರು 
ರಾಜ್ಯ

ಚಿಕ್ಕಬಳ್ಳಾಪುರ: ಬೈಕ್'ಗೆ ಟಿಪ್ಪರ್ ಡಿಕ್ಕಿ, ನಾಲ್ವರ ದುರ್ಮರಣ; Video

ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ವಾಪಸ್ಸಾಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಚಿಕ್ಕಬಳ್ಳಾಪುರ: ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ನಡೆದಿದೆ.

ಅಪಘಾತದಲ್ಲಿ ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್, ಮನೋಜ್ ಎಂಬುವವರು ಮೃತಪಟ್ಟಿದ್ದಾರೆ.

ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ವಾಪಸ್ಸಾಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ನರಸಿಂಹಮೂರ್ತಿಗೆ ಸೇರಿದ ಸಿಟಿ 100 ಬೈಕಿನಲ್ಲಿ ನಾಲ್ವರು ಹೊರಟಿದ್ದು, ಕೆಲ ನಿಮಿಷಗಳಲ್ಲಿ ಅಜ್ಜವಾರ ಗ್ರಾಮಕ್ಕೆ ಹೈವೇಯಿಂದ ಬಲ ತಿರುವು ಪಡೆದುಕೊಳ್ಳಬೇಕಿತ್ತು.

ಅಷ್ಟರಲ್ಲೇ ಟಿಪ್ಪರ್ ಲಾರಿ ಅಡ್ಡ ಬಂದಿದ್ದು, ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಬೈಕ್‌ ನಜ್ಜುಗುಜ್ಜಾಗಿದೆ.

ಅಪಘಾತದ ವಿಚಾರ ತಿಳಿದ ಚಿಕ್ಕಬಳ್ಳಾಪುರ ಪೊಲೀಸರು ಸ್ಥಳ ಪರಿಶೀಲಿಸಿ, ಮೃತ ದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

ಇನ್ನು ಘಟನೆ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಸದ್ಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಟಿಪ್ಪರ್ ವಶಕ್ಕೆ ಪಡೆದು, ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್