ಬೈರತಿ ಬಸವರಾಜ್ 
ರಾಜ್ಯ

ಬಂಧನ ಭೀತಿಯಿಂದ ಪಾರಾದ ಬೈರತಿ ಬಸವರಾಜ್‌: ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಒಂದು ವೇಳೆ ಅವರನ್ನು ಬಂಧಿಸಿದರೆ ಷರತ್ತುಗಳ ಆಧಾರದಡಿ ಬಿಡುಗಡೆ ಮಾಡಬೇಕು. ಬಸವರಾಜ ಅವರು ತನಿಖೆಗೆ ಸಹಕರಿಸಬೇಕು ಎಂದು ಸಿಐಡಿಗೆ ಆದೇಶಿಸಿದೆ

ಬೆಂಗಳೂರು: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಒಂದು ವೇಳೆ ಅವರನ್ನು ಬಂಧಿಸಿದರೆ ಷರತ್ತುಗಳ ಆಧಾರದಡಿ ಬಿಡುಗಡೆ ಮಾಡಬೇಕು. ಬಸವರಾಜ ಅವರು ತನಿಖೆಗೆ ಸಹಕರಿಸಬೇಕು ಎಂದು ಸಿಐಡಿಗೆ ಆದೇಶಿಸಿದೆ. ಆರೋಪಿ ಬಸವರಾಜ ಅವರು ಈ ಸಂಬಂಧ ಎರಡನೇ ಬಾರಿಗೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರು ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅವರನ್ನು ರಾಜಕೀಯ ಕಾರಣಕ್ಕಾಗಿ ಈ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆದಿದೆ. ಬಿಕ್ಲು ಶಿವು ಕೊಲೆಯಲ್ಲಿ ಅವರದ್ದು ಎಂದು ಹೇಳಬಹುದಾದ ಯಾವುದೇ ಪಾತ್ರವಿಲ್ಲ. ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ ಬಳಿಕ‌ ಬಂಧಿಸುವ ಯತ್ನ ನಡೆದಿದೆ.

ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು ಅದರಲ್ಲಿ ಅವರ ವಿರುದ್ಧ ಯಾವುದೇ ದೋಷ ಹೊರಿಸಿಲ್ಲ. ತನಿಖೆ ಬಾಕಿ ಇರಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ ಎಂದು ಹಿರಿಯ ವಕೀಲ ಸಂದೇಶ ಪಿ ಚೌಟ ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು.

ಅರ್ಜಿದಾರರಿಗೆ ಈಗಾಗಲೇ ಹೈಕೋರ್ಟ್‌ 5 ತಿಂಗಳು 10 ದಿನಗಳ ಕಾಲ ಬಂಧನದಿಂದ ರಕ್ಷಣೆ ನೀಡಿತ್ತು. ಕೋಕಾ (ಕರ್ನಾಟಕ ರಾಜ್ಯ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ–2000) ಕಾಯ್ದೆ ಹೇರಿಕೆ ರದ್ದುಪಡಿಸಿದೆ. ಹಾಗಾಗಿ, ಬಂಧನದಿಂದ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿದಾರರ ಮನವಿಯನ್ನು ಪುರಸ್ಕರಿಸಿ, ಪ್ರತಿವಾದಿ ಸಿಐಡಿಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿತು. ಅಂತೆಯೇ, ವಿಚಾರಣೆಯನ್ನು 2026ರ ಜನವರಿ 6ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ರಾಜ್ಯ ಪ್ರಾಸಿಕ್ಯೂಷನ್‌ ಪರ ನಾಗೇಶ್ವರಪ್ಪ ಮತ್ತು ಆರ್.ಸೌಮ್ಯ ಹಾಜರಿದ್ದರು. ಈ ಪ್ರಕರಣದಲ್ಲಿ ವಿಶೇಷ ಪ್ರಾಸಿಕ್ಯೂಟರ್‌ ಆಗಿ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video-ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಪ್ರಗತಿಯಲ್ಲಿ: ಸಿಎಂ ಸಿದ್ದರಾಮಯ್ಯ ಭಾಗಿ

Video-'ಭಾರತ ಬಾಂಗ್ಲಾದೇಶ ಜೊತೆ ನಿಕಟ-ಸ್ನೇಹಪರ ಸಂಬಂಧ ಬಯಸುತ್ತದೆ,ಶೇಖ್ ಹಸೀನಾ ಹಸ್ತಾಂತರ ವಿಷಯ ಪರಿಶೀಲನೆಯಲ್ಲಿದೆ': ವಿದೇಶಾಂಗ ಸಚಿವಾಲಯ

Video-ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಕಷ್ಟ: ಹೆಚ್. ಡಿ ದೇವೇಗೌಡ

ಉತ್ತರ ಪ್ರದೇಶದಂತೆ ಕರ್ನಾಟಕ ಸರ್ಕಾರ 'ಬುಲ್ಡೋಜರ್ ನೀತಿ' ಅನುಸರಿಸುತ್ತಿದೆ: ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ಟೀಕೆ

'ಭಯೋತ್ಪಾದನೆಯಂತಹ ಸಂಘಟಿತ ಅಪರಾಧ ಜಾಲಗಳ ಮೇಲೆ '360 ಡಿಗ್ರಿ ದಾಳಿ': ಅಮಿತ್ ಶಾ

SCROLL FOR NEXT