ಕೇರಳ ಎಂಪಿ ಎಎ ರಹೀಮ್ 
ರಾಜ್ಯ

ಅನಧಿಕೃತ ಮನೆ ಕಳೆದುಕೊಂಡ ಮುಸ್ಲಿಂ ಜನರಿಗಾಗಿ ಮಿಡಿದ ಕೇರಳ ಸರ್ಕಾರ, ಬೆಂಗಳೂರಿನ ಕೋಗಿಲು ಲೇಔಟ್‌ಗೆ ಭೇಟಿ ಕೊಟ್ಟ MP ಎಎ ರಹೀಮ್! Video

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಕ್ಕೆ ಗುರಿಯಾಗಿದೆ. ತೆರವು ಕಾರ್ಯಾಚರಣೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ದಾಳಿಗೆ ಹೋಲಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಕ್ಕೆ ಗುರಿಯಾಗಿದೆ. ತೆರವು ಕಾರ್ಯಾಚರಣೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ದಾಳಿಗೆ ಹೋಲಿಸಿದ್ದಾರೆ. ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬೀಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಹೇಳುವ ಮೂಲಕ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಈ ಚಳಿಗಾಲದಲ್ಲಿ ಮನೆಗಳನ್ನು ನೆಲಸಮ ಮಾಡಿದರೆ ಅವರು ಎಲ್ಲಿಗೆ ಹೋಗಬೇಕು. ಈ ಚಳಿಯಲ್ಲಿ ಮಕ್ಕಳ, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿಗಳು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದರು.

ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಸಂಬಂಧ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕದಲ್ಲಿ ಬುಲ್ಡೋಜರ್ ರಾಜ್ ನಡೆಯುತ್ತಿದೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಪಿಣರಾಯಿ ವಿಜಯನ್ ರಂತಹ ಹಿರಿಯ ನಾಯಕರು ಸತ್ಯಾಸತ್ಯತೆ ಅರಿಯದೇ ಮಾತನಾಡಿರುವುದು ದುರಾದೃಷ್ಟಕರ. ಬೆಂಗಳೂರಿನ ವಿಚಾರ ಏನು ಎಂದು ಅವರು ತಿಳಿಯಬೇಕು. ಈ ಜಾಗ ಘನತ್ಯಾಜ್ಯ ವಿಲೇವಾರಿ ಮಾಡುವ ಕ್ವಾರಿ ಪಿಟ್ ಆಗಿದೆ. ಘನತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ 9 ವರ್ಷಗಳ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು ಬಗ್ಗೆ ಚೆನ್ನಾಗಿ ಗೊತ್ತಿದೆ. ಲ್ಯಾಂಡ್ ಮಾಫಿಯಾದವರು ಸ್ಲಂಗಳನ್ನು ನಿರ್ಮಿಸಲು ನಾವು ಬಿಡುವುದಿಲ್ಲ. ನಾವು ನಮ್ಮ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರು.

ಈ ಮಧ್ಯೆ ಕೇರಳ ರಾಜ್ಯಸಭಾ ಸದಸ್ಯ ಎ ಎ ರಹೀಮ್ ನೇತೃತ್ವದ ನಿಯೋಗವು ಕೋಗಿಲು ಬಡಾವಣೆಗೆ ಭೇಟಿ ನೀಡಿ ಕರ್ನಾಟಕ ಸರ್ಕಾರದ 'ಅಲ್ಪಸಂಖ್ಯಾತ ವಿರೋಧಿ' ನಿಲುವನ್ನು ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!