ರಾಜ್ಯ

News Headlines 27-12-25 | ಕೋಗಿಲು ಬಡಾವಣೆ ತೆರವು: ಬಲ್ಡೋಜರ್ ನೀತಿ ಟೀಕಿಸಿದ ಕೇರಳ ಸಿಎಂ; ವಲಸಿಗರಿಗೆ ಪರ್ಯಾಯ ವ್ಯವಸ್ಥೆ: ಸಿಎಂ; ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸಾವು!

ಕೋಗಿಲು ಬಡಾವಣೆ ತೆರವು: ಬಲ್ಡೋಜರ್ ನೀತಿ ಎಂದ ಸಿಎಂ ಪಿಣರಾಯಿ ವಿಜಯನ್

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆಯನ್ನು ಬುಲ್ಡೋಜರ್ ನೀತಿಗೆ ಹೋಲಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶುಕ್ರವಾರ ಕಿಡಿಕಾರಿದ್ದರು. ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬೀಸಿದೆ. ಯೋಗಿ ನಾಡಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದ್ದರು. ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಏಕಾಏಕಿ ಕಾರ್ಯಾಚರಣೆ ನಡೆಸುವ ಮೂಲಕ ಅಲ್ಲಿನ ಮುಸ್ಲಿಂ ಕುಟುಂಬಗಳನ್ನು ಬೀದಿಗೆ ತಳ್ಳಿದ್ದಾರೆ ಎಂದು ಕೇರಳ ಸಿಎಂ ಆಕ್ರೋಶ ಹೊರಹಾಕಿದ್ದರು. ಮತ್ತೊಂದೆಡೆ ಕೇರಳ ರಾಜ್ಯಸಭಾ ಸದಸ್ಯ ಎ ಎ ರಹೀಮ್ ನೇತೃತ್ವದ ನಿಯೋಗವು ಶನಿವಾರ ಕೋಗಿಲು ಬಡಾವಣೆಗೆ ಭೇಟಿ ನೀಡಿ ನಿವಾಸಿಗಳ ಜೊತೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಎಎ ರಹೀಮ್, ಇದು ಕರ್ನಾಟಕ ಸರ್ಕಾರದ 'ಅಲ್ಪಸಂಖ್ಯಾತ ವಿರೋಧಿ' ನಿಲುವು ಎಂದು ಟೀಕಿಸಿದರು.

ಕೇರಳ ಸಿಎಂ ಹೇಳಿಕೆಯನ್ನು ಟೀಕಿಸಿದ ಡಿಕೆಶಿ. ಅಕ್ರಮ ವಲಸಿಗರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುತ್ತೇವೆ: ಸಿದ್ದು

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಕರ್ನಾಟಕದ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು. ಬೆಂಗಳೂರಿನ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಲ್ಯಾಂಡ್ ಮಾಫಿಯಾದವರು ಸ್ಲಂಗಳನ್ನು ನಿರ್ಮಿಸಲು ನಾವು ಬಿಡುವುದಿಲ್ಲ. ನಾವು ನಮ್ಮ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ. ಅವರಲ್ಲಿ ಯಾರೆಲ್ಲಾ ಅರ್ಹರಿದ್ದಾರೆ. ಅವರಿಗೆ ರಾಜೀವ್ ಗಾಂಧಿ ಯೋಜನೆಯಲ್ಲಿ ಮನೆಗಳನ್ನು ನೀಡಲು ಬದ್ಧವಾಗಿದ್ದೇವೆ ಎಂದರು. ಈ ಮಧ್ಯೆ ದೆಹಲಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇರಳ ಸಿಎಂ ಒಬ್ಬ ಕಮ್ಯೂನಿಸ್ಟ್. 2021-22ರಿಂದ ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದರು. ಹೀಗಾಗಿ ತೆರವು ಕಾರ್ಯಾಚರಣೆ ನಡೆಸಬೇಕಾಯಿತು. ಅವರೆಲ್ಲಾ ಅಕ್ರಮ ವಲಸಿಗರಾದರೂ ಮಾನವೀಯತೆಯ ದೃಷ್ಟಿಯಿಂದ ಅವರಿಗೆ ಬೇರೆಡೆ ಮನೆ ಕಟ್ಟಿಕೊಳ್ಳಲು ಜಾಗ ಕೊಡುತ್ತೇವೆ ಎಂದು ಹೇಳಿದರು.

ನವವಿವಾಹಿತೆ ಗಾನವಿ ಆತ್ಮಹತ್ಯೆ: ಅಪವಾದಗಳಿಗೆ ಅಂಜಿ ಪತಿ ಸೂರಜ್ ಆತ್ಮಹತ್ಯೆ

ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಇದೀಗ ಆರೋಪಗಳಿಗೆ ಅಂಜಿ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಸೂರಜ್ ಜೊತೆ ಆತನ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು ಅವರ ಪರಿಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾನವಿ ಸಾವಿನ ನಂತರ ಕುಟುಂಬಸ್ಥರು ಸೂರಜ್‌ ಕುಟುಂಬದವರ ವಿರುದ್ಧ ಆರೋಪ ಮಾಡಿದ್ದರು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಪತಿ ಸೂರಜ್, ತಮ್ಮ ತಾಯಿ ಜಯಂತಿ ಮತ್ತು ಸಹೋದರ ಸಂಜಯ್ ಜೊತೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು. ಶ್ರೀಲಂಕಾಗೆ ಹನಿಮೂನ್‌ಗೆ ತೆರಳಿದ್ದಾಗ ಗಾನವಿಗೆ ವಿವಾಹಕ್ಕೂ ಮುನ್ನ ಬೇರೊಬ್ಬನ ಜೊತೆ ಸಂಬಂಧ ಇದ್ದ ವಿಚಾರ ಸೂರಜ್ ಗೆ ಗೊತ್ತಾಗಿ ದಂಪತಿ ಮಧ್ಯೆ ಜಗಳ ನಡೆದು ಹನಿಮೂನ್‌ನಿಂದ ಅರ್ಧಕ್ಕೆ ವಾಪಸ್ಸಾಗಿದ್ದರು. ಬಳಿಕ ಸೂರಜ್‌ ಕುಟುಂಬ ಮಾಡಿದ ಅವಮಾನದಿಂದ ನೊಂದು ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಹೀಲಿಯಂ ಸಿಲಿಂಡರ್ ಸ್ಫೋಟ: ಸಾವಿನ ಸಂಖ್ಯೆ 3ಕ್ಕೇರಿಕೆ

ಕ್ರಿಸ್‌ಮಸ್ ಹಬ್ಬದ ದಿನದಂದು ಮೈಸೂರು ಅರಮನೆಯ ಮುಂಭಾಗ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಇದರೊಂದಿಗೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ನಂಜನಗೂಡಿನ ಚಾಮಲಾಪುರದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮಿ ಮೃತ ದುರ್ದೈವಿಗಳು. ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ಗೆ ಹೀಲಿಯಂ ತುಂಬುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಲೀಂ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಮಂಜುಳಾ ಹಾಗೂ ಲಕ್ಷ್ಮಿ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆ ನೀಡಲಾಗುತ್ತಿತ್ತು.

ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಚಾಮರಾಜನಗರದ ಗುಂಡ್ಲುಪೇಟೆಯ ಬಂಡೀಪುರದಲ್ಲಿ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿಯಾಗಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಸಣ್ಣ ಹೈದ ಹುಲಿ ದಾಳಿಗೆ ಮೃತಪಟ್ಟಿದ್ದಾರೆ. ಬಂಡೀಪುರ ಮರಳಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಸಣ್ಣ ಹೈದ ಮೇಲೆ ಹುಲಿ ದಾಳಿ ನಡೆಸಿದ್ದು ಸ್ಥಳದಲ್ಲೇ ವಾಚರ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video